ದಾವಣೆಗರೆ: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿ ಅಲುಗಾಡುತ್ತಿದೆ. ನಾನು ಮಂತ್ರಿಯಾಗಬೇಕೆಂದು ಯಾರ ಕೈಕಾಲು ಹಿಡಿಯುವವನಲ್ಲ. ”ನಮಗೆ ಬರೋದಿದೆ ಸಿಎಂ ಕುರ್ಚಿ” ಎಂದು ಹೇಳುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಹಿರಂಗವಾಗಿ ಹೇಳಿಕೆ ನೀಡಿದರು.
ದಾವಣಗೆರೆ ಜಿಲ್ಲೆಯ ಹರಿಹರ ಪಟ್ಟಣದಲ್ಲಿ ಪಂಚಮಸಾಲಿ ಸಮುದಾಯದ 2ಎ ಮೀಸಲಾತಿಗಾಗಿ ನಡೆಯುತ್ತಿರುವ ಪಾದಯಾತ್ರೆ ಸಮಾವೇಶದಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡಿದರು.
ಮುಖ್ಯಮಂತ್ರಿ ಆಗಿದ್ದವರು ಕೈಗಾರಿಕಾ ಮಂತ್ರಿಯಾಗಿದ್ದಾರೆ. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಬದಲು ಅವರನ್ನು ಇಳಿಸಿ ನಾವೇ ಮುಖ್ಯಮಂತ್ರಿ ಆಗಲಿದ್ದೇವೆ ಎಂದರು.
ವೀರಶೈವ ಲಿಂಗಾಯತರು ಈಗ ನೆನಪಾಯ್ತಾ?. ಕೇಂದ್ರವರು ಸಿಎಂ ಸ್ಥಾನದಿಂದ ವಜಾಗೊಳಿಸುವುದನ್ನು ಮನಗಂಡು ನೀವು ಲಿಂಗಾಯತರ ಅಭಿವೃದ್ಧಿ ನಿಗಮ ಮಾಡಿದ್ದೀರಾ?” ಎಂದು ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ ನಡೆಸಿದರು.ಆಯಾ ಮಠಗಳಿಗೆ ಕೋಟಿಗಟ್ಟಲೆ ಹಣ ನೀಡಿದ್ದರು. ಹತ್ತು ಕೋಟಿಗೆ ಮಠನೇ ಮಾರಾಟ ಮಾಡೋದಾ?” ಎಂದು ಹರಿಹರ ಪಂಚಮಸಾಲಿ ಮಠಕ್ಕೆ ನೀಡಿದ ಹಣದ ಬಗ್ಗೆ ವ್ಯಂಗ್ಯ ವಾಡಿದರು.
ನಮ್ಮ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ ನಾನೇ ನಿಮಗೆ ಕೋಟಿಗಟ್ಟಲೆ ಹಣ ಕೊಡುತ್ತೀನಿ. ಸುಮ್ಮನೆ ಯಾಕೆ ಮೀಸಲಾತಿ ಕೊಡುವುದಾಗಿ ನಾಟಕ ಮಾಡುತ್ತೀರಾ?” ಎಂದು ಪ್ರಶ್ನಿಸಿದರು.
Laxmi News 24×7