Breaking News

ಕರ್ತವ್ಯದ ಸಮಯದಲ್ಲಿ ಕ್ರಿಮಿನಲ್ ಜತೆಗೆ ಸಿಸಿಬಿ ಪೊಲೀಸರ ಎಣ್ಣೆ ಪಾರ್ಟಿ

Spread the love

ಮಂಗಳೂರು : ಕರ್ತವ್ಯದ ವೇಳೆಯಲ್ಲಿ ಬಾರಿನಲ್ಲಿ ಕ್ರಿಮಿನಲ್ ಹಿನ್ನಲೆ ಹೊಂದಿರುವ ವ್ಯಕ್ತಿಯೊಬ್ಬನೊಂದಿಗೆ ಮಂಗಳೂರು ಸಿಸಿಬಿ ಪೊಲೀಸರು ಎಣ್ಣೆ ಪಾರ್ಟಿ ಮಾಡಿದ್ದು, ಈಗ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಪುಲ್ ವೈರಲ್ ಆಗಿದೆ.

ಮಂಗಳೂರು ಸಿಸಿಬಿ ವಿಭಾಗದ ಎಂಟು ಮಂದಿ ಪೊಲೀಸರು ಮಂಗಳೂರು ಹೊರವಲಯದ ಕುತ್ತಾರು ಬಳಿಯ ಬಾರ್ ನಲ್ಲಿ ಎಣ್ಣೆ ಪಾರ್ಟಿ ಮಾಡಿದ್ದರು ಎನ್ನಲಾಗಿದೆ. ಬಾರ್ ಹೊರಗೆ ಸರಕಾರಿ ಟಿ.ಟಿ ವಾಹನ ನಿಲ್ಲಿಸಿ ಪಾರ್ಟಿ ನಡೆಸುತ್ತಿದ್ದರು ಎನ್ನಲಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆ ಮಂಗಳೂರು ಕಮಿಷನರ್ ಶಶಿಕುಮಾರ್ ತನಿಖೆಗೆ ಆದೇಶಿಸಿದ್ದಾರೆ.

ಕ್ರಿಮಿನಲ್ ಹಿನ್ನಲೆ ಹೊಂದಿರು ವ್ಯಕ್ತಿಯ ಜತೆಗೆ ಎಂಟು ಮಂದಿ ಸಿಸಿಬಿ ಪೊಲೀಸರು ಬಾರಿನಲ್ಲಿ ಕುಳಿತು ಮದ್ಯ ಸೇವನೆ ಮಾಡುತ್ತಿರುವ ಬಗ್ಗೆ ಆರೋಪ ಹೇಳಿ ಬಂದಿದೆ. ಮಂಗಳೂರು ಡಿಸಿಪಿ ಹರಿರಾಂ ಶಂಕರ್ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ