Breaking News

ಫೆಬ್ರವರಿ 1ರಿಂದ ಭಕ್ತರಿಗೆ ಸವದತ್ತಿ ಯಲ್ಲಮ್ಮ ದರ್ಶನ

Spread the love

ಸವದತ್ತಿ – ಪ್ರಸಿದ್ಧ ಯಾತ್ರಾ ಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಫೆಬ್ರವರಿ 1ರಿಂದ ಭಕ್ತರಿಗೆ ಮುಕ್ತವಾಗಲಿದೆ.

ಕೊರೋನಾ ಹಿನ್ನೆಲೆಯಲ್ಲಿ ಭಕ್ತರಿಗೆ ದೇವಿಯ ದರ್ಶನವನ್ನು ಕಳೆದ 10 ತಿಂಗಳಿನಿಂದ ನಿರ್ಬಂಧಿಸಲಾಗಿತ್ತು.  ಇದೀಗ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಫೆಬ್ರವರಿ 1ರಿಂದ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಈ ಕುರಿತು ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಕೊಟಾರಗಸ್ತಿ ಮಾಹಿತಿ ನೀಡಿದ್ದಾರೆ.

ಕರ್ನಾಟಕ ಮತ್ತು ಮಹಾರಾಷ್ಟ್ರದ ಲಕ್ಷಾಂತರ ಜನರು ಸವದತ್ತಿ ಯಲ್ಲಮ್ಮ ದೇವಿಯ ಭಕ್ತರಿದ್ದಾರೆ. ಫೆಬ್ರವರಿ ತಿಂಗಳಲ್ಲಿ ಭರತ ಹುಣ್ಣಿಮೆ ಜಾತ್ರೆ ಇರುವುದರಿಂದ ಪ್ರತಿ ವರ್ಷ 4 -5 ಲಕ್ಷ ಜನರು ಸೇರುತ್ತಾರೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ