Breaking News
Home / Uncategorized / ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ

ತೆಲುಗಿಗೆ ಕಾಲಿಟ್ಟ ರಿಷಭ್ ಶೆಟ್ಟಿ: ‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ನಟನೆ

Spread the love

ಕನ್ನಡದ ಪ್ರತಿಭಾನ್ವಿತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಟಾಲಿವುಡ್‌ಗೆ ಪ್ರವೇಶ ಮಾಡಿದ್ದಾರೆ. ‘ಮಿಷನ್ ಇಂಪಾಸಿಬಲ್’ ಚಿತ್ರದ ಮೂಲಕ ತೆಲುಗು ಸಿನಿಲೋಕಕ್ಕೆ ‘ಕಿರಿಕ್ ಪಾರ್ಟಿ’ ನಿರ್ದೇಶಕ ಎಂಟ್ರಿ ಕೊಟ್ಟಿದ್ದಾರೆ.

ಸ್ವರೂಪ್ ಆರ್‌ಜೆಎಸ್ ನಿರ್ದೇಶನದ ಮಾಡುತ್ತಿರುವ ‘ಮಿಷನ್ ಇಂಪಾಸಿಬಲ್’ ಎಂಬ ಚಿತ್ರದಲ್ಲಿ ರಿಷಭ್ ಶೆಟ್ಟಿ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪಾತ್ರದ ಬಗ್ಗೆ ಹೆಚ್ಚು ಮಾಹಿತಿ ಬಿಟ್ಟು ಕೊಡದ ಚಿತ್ರತಂಡ ಈ ಕ್ಯಾರೆಕ್ಟರ್ ಎಲ್ಲರಿಗೂ ಇಷ್ಟ ಆಗಲಿದೆ ಎಂದಷ್ಟೇ ತಿಳಿಸಿದ್ದಾರೆ.

‘ಮಿಷನ್ ಇಂಪಾಸಿಬಲ್’ ಚಿತ್ರದಲ್ಲಿ ಸುಹಾಸ್ ಮತ್ತು ಸಂದೀಪ್ ರಾಜ್ ಪ್ರಮುಖ ಪಾತ್ರ ನಿಭಾಯಿಸುತ್ತಿದ್ದಾರೆ. ರಿಷಭ್ ಶೆಟ್ಟಿ ತೆಲುಗು ಡೆಬ್ಯೂಗೆ ಸಂದೀಪ್ ರಾಜ್ ಸಂತಸ ವ್ಯಕ್ತಪಡಿಸಿದ್ದು, ”ನಿಮ್ಮ ಜೊತೆ ತೆರೆಹಂಚಿಕೊಳ್ಳುವುದು ನಿಜಕ್ಕೂ ಅದ್ಭುತ. ನಟ ಹಾಗೂ ನಿರ್ದೇಶನದ ಮೂಲಕ ಅನೇಕರಿಗೆ ನೀವು ಸ್ಫೂರ್ತಿ” ಎಂದು ಟ್ವೀಟ್ ಮಾಡಿದ್ದಾರೆ.

ಈ ಚಿತ್ರದ ಬಗ್ಗೆ ರಿಷಭ್ ಶೆಟ್ಟಿ ಸಹ ಹೆಚ್ಚು ವಿಷಯ ಬಿಟ್ಟುಕೊಟ್ಟಿಲ್ಲ. ನಿರ್ದೇಶಕರಿಗೆ ಧನ್ಯವಾದ ಮಾತ್ರ ತಿಳಿಸಿದ್ದಾರೆ. ಸದ್ಯದ ಮಾಹಿತಿ ಪ್ರಕಾರ ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಎರಡನೇ ಹಂತದ ಶೂಟಿಂಗ್‌ನಲ್ಲಿ ರಿಷಭ್ ಭಾಗವಹಿಸಲಿದ್ದಾರೆ.

ಇತ್ತೀಚಿಗಷ್ಟೆ ‘ಬೆಲ್ ಬಾಟಂ-2’ ಚಿತ್ರವನ್ನು ರಿಷಭ್ ಶೆಟ್ಟಿ ಆರಂಭಿಸಿದ್ದಾರೆ. ಜಯತೀರ್ಥ ನಿರ್ದೇಶನದಲ್ಲಿ ಈ ಸಿನಿಮಾ ಸೆಟ್ಟೇರಿದ್ದು, 2019ರ ಸೂಪರ್ ಹಿಟ್ ಚಿತ್ರದ ಮುಂದುವರಿದ ಭಾಗ ಇದಾಗಿದೆ.

ಈ ಸಿನಿಮಾಗಳನ್ನು ಬಿಟ್ಟು ರಿಷಭ್ ಶೆಟ್ಟಿ ಬಹಳ ಬ್ಯುಸಿ ಇದ್ದಾರೆ. ಹೀರೋ, ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್‌ ಕೈಯಲ್ಲಿಟ್ಟುಕೊಂಡಿದ್ದಾರೆ.


Spread the love

About Laxminews 24x7

Check Also

ಜಗದೀಶ್ ಶೆಟ್ಟರ್‌ ಬಗ್ಗೆ ಸ್ಫೋಟಕ ಭವಿಷ್ಯ ನುಡಿದ ಬಾಲಚಂದ್ರ ಜಾರಕಿಹೊಳಿ

Spread the loveಬೆಳಗಾವಿ, : ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆದಿದ್ದು, ಇನ್ನುಳಿದ ಕ್ಷೇತ್ರಗಳಿಗೆ ಮೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ