Breaking News

ಕೇಂದ್ರ ಬಜೆಟ್​​​ನಲ್ಲಿ ಹೈದರಾಬಾದ್​​-ಕರ್ನಾಟಕ ಭಾಗಕ್ಕೆ ತೀವ್ರ ನಿರಾಸೆ;

Spread the love

ಕಲಬುರ್ಗಿ(ಫೆ.01): ಕೋವಿಡ್ ನಂತರ ಕೇಂದ್ರ ಬಜೆಟ್ ಮಂಡನೆಯಾಗಿದ್ದು, ಬಹು ನಿರೀಕ್ಷಿತ ಬಜೆಟ್ ಕೆಲ ವಲಯಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ. ಅದರಲ್ಲಿಯೂ ಅತ್ಯಂತ ಹಿಂದುಳಿದ ಭಾಗವೆನಿಸಿಕೊಂಡ ಹೈದರಾಬಾದ್ ಕರ್ನಾಟಕಕ್ಕೆ ಬಜೆಟ್ ನಲ್ಲಿ ಯಾವುದೇ ಯೋಜನೆಗಳು ಘೋಷಣೆಯಾಗಿಲ್ಲ. ಇದರಿಂದಾಗಿ ಈ ಭಾಗದ ಜನತೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಿರೀಕ್ಷೆಗಳೆಲ್ಲವೂ ಹುಸಿಯಾಗುವ ಜೊತೆಗೆ ತೈಲ ದರ ಏರಿಕೆಯ ಬರೆ ಹಾಕಿಸಿಕೊಳ್ಳುವಂತಾಗಿದೆ ಎಂದು ಜನತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮ್ ಇಂದು ಮಂಡಿಸಿದ ಬಜೆಟ್ ಮೇಲೆ ಹೈದರಾಬಾದ್ ಕರ್ನಾಟಕ ಅಥವಾ ಕಲ್ಯಾಣ ಕರ್ನಾಟಕದ ಜನತೆ ಬೆಟ್ಟದಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದರು.  ಹಿಂದುಳಿದ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ ಸಿಗಲಿದೆ. ರೈಲ್ವೆ ವಿಭಾಗೀಯ ಕೇಂದ್ರಕ್ಕೆ ಹೆಚ್ಚಿನ ಅನುದಾನ ಘೋಷಣೆಯಾಗಲಿದೆ. ಕಲಬುರ್ಗಿಯಲ್ಲಿ ಏಮ್ಸ್ ಸ್ಥಾಪಿಸೋ ಘೋಷಣೆಯಾಗಲಿದೆ


Spread the love

About Laxminews 24x7

Check Also

ರಾಯಬಾಗ ತಾಲೂಕಿನ 19 ಗ್ರಾಮಗಳ 39 ಕೆರೆಗಳಿಗೆ ನೀರು ತುಂಬಿಸುವ ಮಹತ್ವಾಕಾಂಕ್ಷಿ ಏತ ನೀರಾವರಿ ಯೋಜನೆಯ ಕಾಮಗಾರಿ ಪ್ರಾಯೋಗಿಕವಾಗಿ ಚಾಲನೆ

Spread the love ರಾಯಬಾಗ ತಾಲೂಕಿನ ಬಾವನ ಸೌಂದತ್ತಿ ಗ್ರಾಮದ ಕೃಷ್ಣಾ ನದಿಯ ದಡದಲ್ಲಿ ಕೈಗೊಳ್ಳಲಾದ, ರಾಯಬಾಗ ತಾಲೂಕಿನ 19 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ