Breaking News

ಅರ್ಥವ್ಯವಸ್ಥೆಯ ಪುನಶ್ಚೇತನದ ಬಜೆಟ್​ ಎಂದ ಸಿಎಂ; ಆತ್ಮ ಬರ್ಬಾದ್​ ಬಜೆಟ್​ ಎಂದ ಸಿದ್ದರಾಮಯ್ಯ

Spread the love

ಬೆಂಗಳೂರು (ಫೆ.1): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಮಂಡಿಸಿರುವ ಬಜೆಟ್​ ಬಸವಳಿದಿರುವ ಭಾರತೀಯ ಅರ್ಥವ್ಯವಸ್ಥೆಯ ಪುನಶ್ಚೇತನಕ್ಕೆ ಸಂಜೀವಿನಿಯಂತಿದೆ ಎಂದು ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಬಜೆಟ್​ ಕುರಿತು ಪ್ರತಿಕ್ರಿಯಿಸಿದ ಅವರು, ಕೊರೋನಾ ಸಾಂಕ್ರಾಮಿಕದಿಂದ ಸ್ಥಗಿತಗೊಂಡ ಅರ್ಥವ್ಯವಸ್ಥೆ ಮತ್ತೆ ಮೇಲೆರಲು ವೇಗವರ್ಧಕವಾಗಿದೆ. ಕೋವಿಡ್​ ಸಂಕಷ್ಟದ ನಡುವೆ ಮಂಡನೆಯಾಗಿರುವ ಈ ಬಜೆಟ್​ ಉತ್ತಮವಾಗಿದೆ ಎಂದಿದ್ದಾರೆ. ಕೋವಿಡ್ ಲಸಿಕೆ ಅಭಿಯಾನಕ್ಕೆ 35,000 ಕೋಟಿ ರೂ, ಕೃಷಿ ಬಲವರ್ಧನೆ, ಅನ್ನದಾತ ರೈತರ ಅಭಿವೃದ್ಧಿಗೆ ಪ್ರಾಮುಖ್ಯತೆ, ಕೌಶಲ್ಯ ಹಾಗೂ ಮೂಲಸೌಕರ್ಯಾಭಿವೃದ್ಧಿ, ಕೈಗಾರಿಕಾ ಬೆಳವಣಿಗೆಗೆ ಬಜೆಟ್‍ನಲ್ಲಿ ವಿಶೇಷಗಮನ ನೀಡಲಾಗಿರುವುದು ಸ್ವಾಗತಾರ್ಹ. ದೇಶದ ಬೆಳವಣಿಗೆಗೆ ನೆರವಾಗುವ ಬಜೆಟ್​ ಇದಾಗಿದ್ದು, ಅರ್ಥವ್ಯವಸ್ಥೆ ಪುನರ್ವರ್ಧನೆಗೆ ಸಹಕಾರಿಯಾಗಲಿದೆ ಎಂದಿದ್ದಾರೆ.

ಸ್ವಾವಲಂಬಿ ಭಾರತ ನಿರ್ಮಾಣದ ನಿಟ್ಟಿನಲ್ಲಿ ಬಜೆಟ್ ನಲ್ಲಿ 13 ವಲಯಗಳಲ್ಲಿ ವಿಶೇಷ ಕಾರ್ಯಕ್ರಮ ರೂಪಿಸಿರುವುದು, ಸ್ವಚ್ಛ ಅಭಿಯಾನಕ್ಕೆ 1.41 ಲಕ್ಷ ಕೋಟಿ ರೂ. ಅನುದಾನ ಒದಗಿಸಿರುವುದನ್ನು ಸ್ವಾಗತಿಸುತ್ತೇನೆ. ಪ್ರಸಕ್ತ ಬಜೆಟ್ ಅರ್ಥವ್ಯವಸ್ಥೆಯ ಪುನಶ್ಚೇತನದೊಂದಿಗೆ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಶಕ್ತಿ ತುಂಬುವ ಸಾಮರ್ಥ್ಯ ಪ್ರದರ್ಶಿಸಿದೆ.

ಆತ್ಮ ಬರ್ಬಾದ್​ ಬಜೆಟ್​; ಸಿದ್ದರಾಮಯ್ಯ ವ್ಯಂಗ್ಯಬಜೆಟ್​ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ವಿಪಕ್ಷ ನಾಯಕ ಸಿದ್ಧರಾಮಯ್ಯ, ಇದು ಯಾವುದೇ ಚೇತರಿಗೆ , ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್​ ಆಗಿದ್ದು, ಇದೊಂದು ಆತ್ಮ ಬರ್ಬಾದ್​ ಬಜೆಟ್​ ಎಂದು ಟೀಕಿಸಿದ್ದಾರೆ. ಕಲಾಪದ ಬಳಿಕ ಈ ಕುರಿತು ಪ್ರತಿಕ್ರಿಯಿಸಿದ ಅವರು, ಈ ಮೊದಲು ಬಜೆಟ್​ ಬಗ್ಗೆ ಯಾವುದೇ ನಿರೀಕ್ಷೆ ಇಲ್ಲ ಎಂದಿದ್ದೆ. ನಾನು ಹೇಳಿದ ಮಾತು ಸತ್ಯವಾಗಿದೆ. ಅದರಂತೆಯೇ ಬಜೆಟ್​ ಮಂಡಿಸಿದ್ದಾರೆ. ಆತ್ಮನಿರ್ಭರದ ಮೂರು ಪ್ಯಾಕೇಜ್​ ಘೋಷಿಸಿದ್ದಾರೆ. ಆದರೆ, ಅವರು ಆತ್ಮ ಬರ್ಬಾದ್​ ಬಜೆಟ್​ ಕೊಟ್ಟಿದ್ದಾರೆ ಎಂದು ವ್ಯಂಗ್ಯವಾಡಿದರು.


Spread the love

About Laxminews 24x7

Check Also

ಆನ್‌ಲೈನ್ ಗೇಮಿಂಗ್ ಪ್ರಚಾರ-ನಿಯಂತ್ರಣ ಕಾಯಿದೆ ಪ್ರಶ್ನಿಸಿ ಹೈಕೋರ್ಟ್​ಗೆ ಅರ್ಜಿ: ಆ.30ಕ್ಕೆ ವಿಚಾರಣೆ

Spread the love ಬೆಂಗಳೂರು: ಹಣವನ್ನು ಪಣಕ್ಕಿಟ್ಟು ಆಡುವಂತಹ ಆನ್‌ಲೈನ್​ ಗೇಮ್​ಗಳಿಗೆ ನಿಷೇಧ ಹೇರುವುದಕ್ಕೆ ಅವಕಾಶ ಕಲ್ಪಿಸುವ ಆನ್‌ಲೈನ್ ಗೇಮಿಂಗ್ ಪ್ರಚಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ