Breaking News

ವಿಮಾ ಕ್ಷೇತ್ರದಲ್ಲಿ ಎಫ್‍ಡಿಐ ಶೇ.49ರಿಂದ ಶೇ.ಶೇ.74ಕ್ಕೆ ಹೆಚ್ಚಳ

Spread the love

ನವದೆಹಲಿ, ಫೆ.1- ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯದಲ್ಲಿ ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಯನ್ನು ಶೇ.49ರಿಂದ ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿಸಲು ವಿಮಾ ಕಾಯ್ದೆಗೆ ತಿದ್ದುಪಡಿ ತರಲಾಗಿದೆ ಎಂದು ಘೋಷಿಸಿದರು.

ವಿದೇಶಿ ಸಂಸ್ಥೆಗಳು ಭಾರತದಲ್ಲಿ ಕಾರ್ಯಾರಂಭ ಮಾಡಲು ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ವಿವರಿಸಿದರು. ವಿಮಾ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ನೇರ ಬಂಡವಾಳ ಹೂಡಿಕೆಗೆ ಅವಕಾಶ ನೀಡುವ ನೀತಿಯನ್ನು ಜಾರಿಗೆ ತಂದ ನಂತರ ಹಲವಾರು ವಿದೇಶಿ ಸಂಸ್ಥೆಗಳು ವಿಮಾ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳಲು ಮುಂದೆ ಬಂದಿರುವ ಹಿನ್ನೆಲೆಯಲ್ಲಿ ಎಫ್‍ಡಿಐ ಅನ್ನು ಶೇ.74ರಷ್ಟಕ್ಕೆ ಹೆಚ್ಚಿಸಲಾಗಿದೆ.

ವಿಮಾ ಕ್ಷೇತ್ರದಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆಗೆ ಹೆಚ್ಚಿನ ಆದ್ಯತೆ ನೀಡಿರುವುದರಿಂದ ಹೆಚ್ಚು ಹೆಚ್ಚು ಬಂಡವಾಳ ಆಕರ್ಷಿಸಬಹುದು ಎಂಬ ಉದ್ದೇಶದಿಂದ ಈ ನೀತಿಯನ್ನು ಜಾರಿಗೆ ತರಲಾಗಿದೆ ಎಂದರು


Spread the love

About Laxminews 24x7

Check Also

ಶಾಲಾ ತರಗತಿ ಕೊಠಡಿಗಳನ್ನು ಉದ್ಘಾಟಿಸಿದ ರಾಹುಲ್  ಜಾರಕಿಹೊಳಿ

Spread the loveಇವತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ರಾಜ್ಯ ಯುವ ಪ್ರಧಾನ ಕಾರ್ಯದರ್ಶಿಗಳು ಹಾಗೂ ಅಪೇಕ್ಸ ಮತ್ತು ಡಿಸಿಸಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ