Breaking News
Home / ಜಿಲ್ಲೆ / ಬೆಂಗಳೂರು / ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

ಎಟಿಎಂ ನಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ 12 ವರ್ಷ ಜೈಲು ಶಿಕ್ಷೆ 8 ವರ್ಷಗಳ ಹಿಂದಿನ ಪ್ರಕರಣಕ್ಕೆ ಇಂದು ತೀರ್ಪು

Spread the love

ಬೆಂಗಳೂರು: 2013ರಲ್ಲಿ ಜ್ಯೋತಿ ಉದಯ ಎಂಬುವರ ಮೇಲೆ ಎಟಿಎಂ ನಲ್ಲಿ ಭೀಕರವಾಗಿ ಹಲ್ಲೆ ಮಾಡಿದ್ದ ಮಧುಕರ್ ರೆಡ್ಡಿಗೆ ಒಟ್ಟು 12 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಸಿಎಚ್ ಕೋರ್ಟ್‌ ಮಂಗಳವಾರ ತೀರ್ಪು ನೀಡಿದೆ.

 

ಅಪರಾಧಿ ಮಧುಕರ್ ಗೆ ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್,​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ ಗರಿಷ್ಟ 10 ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕು.

 

ಅಂದ ಹಾಗೆ, ಮಧುಕರ್ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಹಾಗಾಗಿ, ಆತ ಉಳಿದ 7 ವರ್ಷ ಜೈಲಿನಲ್ಲಿ ಕಳೆಯಬೇಕಿದೆ.

 

ಘಟನೆ ನಡೆದು 8 ವರ್ಷಗಳ ನಂತರ ತೀರ್ಪು ಪ್ರಕಟವಾಗಿದೆ. ನಗರದ 65ನೇ ಸಿಸಿಎಚ್ ಕೋರ್ಟ್‌ ಈ ತೀರ್ಪು ನೀಡಿದೆ. ಕೇಸ್​ನಲ್ಲಿ ಅಭಿಯೋಜಕರಾಗಿ ಎಂ.ವಿ. ತ್ಯಾಗರಾಜ್ ವಾದ ಮಂಡಿಸಿದ್ದರು.

 

2013ರ ನವೆಂಬರ್ 19ರಂದು ಬಿಬಿಎಂಪಿ ಪ್ರಧಾನ ಕಚೇರಿ ಎದುರಿಗೆ ಇರುವ ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಹಣ ಡ್ರಾ ಮಾಡುತ್ತಿದ್ದ ಬ್ಯಾಂಕ್ ಮ್ಯಾನೇಜರ್ ಜ್ಯೋತಿ ಅವರ ಮೇಲೆ ಹಣಕ್ಕಾಗಿ ಮಧುಕರ್ ಮಚ್ಚಿನಿಂದ ಹಲ್ಲೆಗೈದು ಪರಾರಿಯಾಗಿದ್ದ. ಈ ಪ್ರಕರಣ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ