Breaking News

ನಾಯಕಿಯ ಅರ್ಧ ಫೋಟೋ ಶೇರ್ ಮಾಡಿ ಕುತೂಹಲ ಮೂಡಿಸಿದ ರಕ್ಷಿತ್ ಶೆಟ್ಟಿ & ತಂಡ; ಆ ನಟಿ ಇವರೇ ನೋಡಿ?

Spread the love

ಸ್ಯಾಂಡಲ್ ವುಡ್ ನ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಸದ್ಯ ‘777 ಚಾರ್ಲಿ’ ಸಿನಿಮಾದ ಚಿತ್ರೀಕರಣ ಮುಗಿಸಿದ್ದಾರೆ. ಇದೀಗ ಚಿತ್ರದ ಪ್ಯಾಚ್ ವರ್ಕ್ ಕೆಲಸದಲ್ಲಿ ನಿರತರಾಗಿದ್ದಾರೆ. ಇತ್ತೀಚಿಗಷ್ಟೆ ಕಾಶ್ಮೀರದಲ್ಲಿ ಚಿತ್ರೀಕರಣ ಮುಗಿಸಿ ವಾಪಸ್ ಆಗಿದ್ದ ಸಿನಿಮಾತಂಡ ತುಂಬಾ ಕಷ್ಟದ ಭಾಗದ ಚಿತ್ರೀಕರಣವನ್ನು ಸಂಪೂರ್ಣ ಮಾಡುವ ಮೂಲಕ ಚಾರ್ಲಿ ಶೂಟಿಂಗ್ ಮುಕ್ತಾಯವಾಗಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು.

ಚಾರ್ಲಿ ಮುಗಿಯುತ್ತಿದ್ದಂತೆ ರಕ್ಷಿತ್ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾದಲ್ಲಿ ಬ್ಯುಸಿಯಾಗುತ್ತಿದ್ದಾರೆ. ಈಗಾಗಲೇ ಪ್ರಿ ಪ್ರೊಡಕ್ಷನ್ ಕೆಲಸ ಮುಗಿಸಿ ಚಿತ್ರೀಕರಣಕ್ಕೆ ಸಿದ್ಧವಾಗಿರುವ ಸಪ್ತ ಸಾಗರದಾಚೆ ಎಲ್ಲೋ ಟೀಂ, ನಾಯಕಿಯ ಅರ್ಧ ಫೋಟೋ ರಿವೀಲ್ ಮಾಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದ್ದಾರೆ.

ರಕ್ಷಿತ್ ಜೊತೆ ರೊಮ್ಯಾನ್ಸ್ ಮಾಡುತ್ತಿರುವ ನಾಯಕಿ ಯಾರಿರಬಹುದು ಎನ್ನುವ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ನಾಯಕಿಯ ಅರ್ಧ ಫೋಟೋ ನೋಡಿ ಯಾರಿರಬಹುದು ಎಂದು ಅಭಿಮಾನಿಗಳು ಸಾಕಷ್ಟು ಹೆಸರುಗಳನ್ನು ಹೇಳುತ್ತಿದ್ದಾರೆ. ಅಂದಹಾಗೆ ರಕ್ಷಿತ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿರುವ ನಟಿ ಮತ್ತು ಈ ಅರ್ಧ ಫೋಟೋದಲ್ಲಿರುವ ಸುಂದರಿ ರುಕ್ಮಿಣಿ ವಸಂತ್.

ರುಕ್ಮಿಣಿ ವಸಂತ್ ಈಗಾಗಲೇ ಕನ್ನಡದಲ್ಲಿ ಒಂದು ಸಿನಿಮಾ ಮಾಡಿದ್ದಾರೆ. ಹೌದು, ಬೀರ್ ಬಲ್ ಎನ್ನುವ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದಾರೆ. ಇದೀಗ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾ ಮೂಲಕ ಎರಡನೇ ಬಾರಿಗೆ ಪ್ರೇಕ್ಷಕರ ಮುಂದೆ ಬರಲು ಸಜ್ಜಾಗಿದ್ದಾರೆ.

ಅಂದಹಾಗೆ ರುಕ್ಮಿಣಿ ಆಡಿಷನ್ ಮೂಲಕ ಸಿನಿಮಾಗೆ ಆಯ್ಕೆಯಾಗಿದ್ದು, ರಕ್ಷಿತ್ ಮತ್ತು ತಂಡದ ಜೊತೆ ಕೆಲಸ ಮಾಡಲು ಸಖತ್ ಎಕ್ಸಾಯಿಟ್ ಆಗಿದ್ದಾರೆ. ಅಂದಹಾಗೆ ಸಪ್ತ ಸಾಗರದಾಚೆ ಎಲ್ಲೋ ಸಿನಿಮಾಗೆ ಗೋಧಿ ಬಣ್ಣ ಸಾಧಾರಣ ಮೈ ಕಟ್ಟು ಖ್ಯಾತಿಯ ನಿರ್ದೇಶಕ ಹೇಮಂತ್ ರಾವ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪುಷ್ಕರ್ ಮಲ್ಲಿಕಾರ್ಜುನಯ್ಯ ನಿರ್ಮಾಣದಲ್ಲಿ ಸಿನಿಮಾ ಮೂಡಿಬರುತ್ತಿದೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ