Breaking News

PUC ವಿದ್ಯಾರ್ಥಿನಿಯರಿಗೆ 25 ಸಾವಿರ ರೂ, ಡಿಗ್ರಿ ಮುಗಿಸಿದ ಹೆಣ್ಣುಮಕ್ಕಳಿಗೆ 50 ಸಾವಿರ! ಸರ್ಕಾರದಿಂದ ಬಂಪರ್ ಗಿಫ್ಟ್

Spread the love

ಪಾಟ್ನಾ : ಪಿಯುಸಿ ತೇರ್ಗಡೆ ಮಾಡಿರುವ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ಸಾವಿರ ರೂ. ಹಾಗೂ ಪದವಿ ಮುಗಿಸಿದ ವಿವಾಹಿತ ಮತ್ತು ಅವಿವಾಹಿತ ಹೆಣ್ಣುಮಕ್ಕಳಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಬಿಹಾರ ಸರ್ಕಾರ ಘೋಷಣೆ ಮಾಡಿದೆ.

ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಸೇರಿದಂತೆ 20 ಅಂಶಗಳ ಯೋಜನೆಗೆ ಜಾರಿಗೆ ನಿರ್ಧರಿಸಿರುವ ನಿತೀಶ್ ಕುಮಾರ್ ಸರ್ಕಾರ ಅವಿವಾಹಿತ ಮತ್ತು ವಿವಾಹಿತ ಸ್ತ್ರೀಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ.

ಬಿಹಾರದಲ್ಲಿ ಫೆ. 1 ರಂದು ಪಿಯುಸಿಯವರೆಗೆ ಪರೀಕ್ಷೆಗಳು ಆರಂಭವಾಗಿದ್ದು, ಇದರಲ್ಲಿ ತೇರ್ಗಡೆ ಹೊಂದಿದ ಹೆಣ್ಣು ಮಕ್ಕಳಿಗೆ ಕನ್ಯಾ ಉತ್ತಮ ಯೋಜನೆಯಡಿ ತಲಾ 25 ಸಾವಿರ ರೂ. ಗಳನ್ನು ಅವರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ವರ್ಗಾಯಿಸಲಾಗುತ್ತದೆ.


Spread the love

About Laxminews 24x7

Check Also

30 ದಿನ ಜೈಲಿಗೆ ಹೋದರೆ ಪ್ರಧಾನಿ, ಸಿಎಂ, ಸಚಿವರು ವಜಾ – ಮಸೂದೆಗೆ ಸಿದ್ಧತೆ

Spread the loveನವದೆಹಲಿ: ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳು ಮತ್ತು ಸಚಿವರು ಸತತ 30 ದಿನಗಳ ಕಾಲ ಬಂಧನದಲ್ಲಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ