Breaking News

ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

Spread the love

ಕೋವಿಡ್​ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು ಚಂದನವನದ ತಾರೆಯರ ಕಣ್ಣು ಕೆಂಪಗಾಗಿಸಿದೆ.

ಈ ವಿಚಾರವಾಗಿ ಟ್ವೀಟ್​ ಮಾಡಿರುವ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ, ಮಾರ್ಕೆಟ್​ನಲ್ಲಿ ಗಿಜಿ ಗಿಜಿಗುಡುತ್ತಿರುವ ಜನ, ಬಸ್​ನಲ್ಲೂ ಜನರ ಹಿಂಡೇ ತುಂಬಿರುತ್ತೆ. ಇದ್ಯಾವುದಕ್ಕೂ ಹಾಕದ ನಿರ್ಬಂಧವನ್ನ ಥಿಯೇಟರ್​ಗಳಿಗೆ ಮಾತ್ರ ಏಕೆ ಹಾಕಿದ್ದೀರಿ..? ಎಂದು ರಾಜ್ಯ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ದಾರೆ.

ನಟ ಧ್ರುವ ಸರ್ಜಾ ಅಭಿನಯದ ಬಹುನಿರೀಕ್ಷಿತ ʼಪೊಗರುʼ ಸಿನಿಮಾ ಇದೇ ತಿಂಗಳ 19ನೇ ತಾರೀಖಿನಂದು ತೆರೆ ಕಾಣಲಿದೆ. ಈ ನಡುವೆ ರಾಜ್ಯ ಸರ್ಕಾರದ ಈ ಕ್ರಮದಿಂದ ಬೇಸರಗೊಂಡಿರುವ ಧ್ರುವ ಸರ್ಜಾ, ಸರ್ಕಾರಕ್ಕೆ ಟ್ವೀಟ್​ ಮೂಲಕ ಪ್ರಶ್ನೆ ಮಾಡಿದ್ದಾರೆ. ಧ್ರುವ ಸರ್ಜಾ ಮಾತ್ರವಲ್ಲದೇ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿಯ ಬಹುತೇಕ ಸದಸ್ಯರು ಈ ಬಗ್ಗೆ ಅಸಮಾಧಾನ ಹೊರ ಹಾಕಿದ್ದಾರೆ.
ಕೊರೊನಾ ಸಂಬಂಧ ಹೊಸ ಮಾರ್ಗಸೂಚಿ ಹೊರಡಿಸಿದ್ದ ಕೇಂದ್ರ ಸರ್ಕಾರ 100 ಪ್ರತಿಶತ ಸೀಟು ಭರ್ತಿಗೆ ಅವಕಾಶ ನೀಡಬಹುದೆಂದು ಹೇಳಿತ್ತು. ಆದರೆ ಈ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವನ್ನ ಆಯಾ ರಾಜ್ಯ ಸರ್ಕಾರಗಳಿಗೆ ನೀಡಿದೆ.


Spread the love

About Laxminews 24x7

Check Also

ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ ‘ಕನ್ನಡ ದೀಕ್ಷೆ’ ಪ್ರತಿಜ್ಞಾ ಸಮಾರಂಭದಲ್ಲಿ ಭಾಗವಹಿಸಿ, ಮಾತನಾಡಲಾಯಿತು.

Spread the love ಇಂದು ಬೆಳಗಾವಿಯ ಗಾಂಧಿ ಭವನದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾ ಘಟಕದ ನೇತೃತ್ವದಲ್ಲಿ ನಡೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ