Breaking News

ಏರೋ ಇಂಡಿಯಾ 2021 ಕಾರ್ಯಕ್ರಮದಲ್ಲಿ ಕಣ್ಮರೆಯಾಗಿದೆ ಕನ್ನಡ : H.D.K.

Spread the love

ಬೆಂಗಳೂರು: ಬೆಂಗಳೂರಿನ ಯಲಹಂಕದಲ್ಲಿ ಆಯೋಜಿಸಿರುವ ಏರೋ ಇಂಡಿಯಾ 2021 ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಕನ್ನಡ ಕಣ್ಮರೆಯಾಗಿದೆ. ತ್ರಿಭಾಷಾ ಸೂತ್ರ ಮರೆಯಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಕೇವಲ ಇಂಗ್ಲಿಷ್ ಮತ್ತು ಹಿಂದಿ ಭಾಷೆಯ ಫಲಕ ಮಾತ್ರ ವೇದಿಕೆಯಲ್ಲಿ ರಾರಾಜಿಸುತ್ತಿದೆ. ಈ ಮೂಲಕ ಕನ್ನಡಕ್ಕೆ ಕನ್ನಡ ನೆಲದಲ್ಲೇ ಅಪಚಾರ ಮಾಡಲಾಗಿದೆ. ಇದನ್ನು ಖಂಡಿಸುತ್ತೇನೆ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭದ್ರಾವತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಲಾಗಿತ್ತು. ಈ ಕುರಿತ ಆಕ್ಷೇಪಗಳಿಗೆ ಉತ್ತರಿಸಿದ್ದ ಕೇಂದ್ರ, ಕನ್ನಡ ಕಡ್ಡಾಯವಲ್ಲ ಎಂದಿತ್ತು. ಇದು ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಕಹಿ ನೆನಪು ಮರೆಯುವ ಮೊದಲೇ ಬೆಂಗಳೂರಿನಲ್ಲಿ ಕನ್ನಡಕ್ಕೆ ಅಪಚಾರ ಮಾಡಲಾಗಿದೆ.

ಇದು ಅತ್ಯಂತ ನೋವಿನ ಸಂಗತಿ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಕ್ಷಣಾ‌‌‌ ಸಚಿವ ರಾಜನಾಥ್‌ಸಿಂಗ್ ಯಲಹಂಕದ‌ ಏರ್ ಫೋರ್ಸ್ ಸ್ಟೇಷನ್ ನಲ್ಲಿ ಆಯೋಜಿಸಿರುವ ಏರೋ ಇಂಡಿಯಾ ಕಾರ್ಯಕ್ರಮ‌ ಉದ್ಘಾಟಿಸಿದ್ದರು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದರು. ರಾಜ್ಯದ ಹಲವು ನಾಯಕರೂ ಅಲ್ಲಿದ್ದರು. ಇವರ್ಯಾರಿಗೂ ಕನ್ನಡಕ್ಕಾದ ಅಪಮಾನ ಕಾಣಲಿಲ್ಲವೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.


Spread the love

About Laxminews 24x7

Check Also

ಶಾಸಕರ ಜೊತೆಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಸುರ್ಜೇವಾಲರಿಂದ ಮಿನಿಸ್ಟರ್​​​ ಜೊತೆ One to One ಸಭೆ

Spread the love ಬೆಂಗಳೂರು: ಶಾಸಕರೊಟ್ಟಿಗಿನ ಒನ್ ಟು ಒನ್ ಸಭೆ ಬಳಿಕ ಇದೀಗ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲಾ ಸಚಿವರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ