Breaking News

ಫೆ.2022ರೊಳಗೆ ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಪೂರ್ಣ

Spread the love

ಬೆಂಗಳೂರು,ಫೆ.3- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿರ್ಮಾಣವಾಗುತ್ತಿರುವ ಹತ್ತು ಪಥಗಳ ಹೆದ್ದಾರಿಯು 2022ರ ಫೆಬ್ರವರಿಯಲ್ಲಿ ಮುಕ್ತಾಯವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಮರಿತಿಬ್ಬೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಪಥದ ಹೆದ್ದಾರಿಯ ಜೊತೆಗೆ ಇಕ್ಕೆಲಗಳಲ್ಲಿ ಎರಡು ಪಥದ ಸರ್ವೀಸ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತಿದೆ.

ಮೊದಲ ಪ್ಯಾಕೇಜ್‍ನಲ್ಲಿ ಬೆಂಗಳೂರಿನಿಂದ ನಿಡಘಟ್ಟದವ್ಟರೆಗೆ, 2ನೇ ಪ್ಯಾಕೇಜ್‍ನಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಪ್ಯಾಕೇಜ್‍ಗೆ 2190 ಕೋಟಿ ರೂ. ಆಗಿದ್ದು, ಶೇ.67.5ರಷ್ಟು ಕಾಮಗಾರಿ ಪೂರ್ಣವಾಗಿದೆ. 2ನೇ ಪ್ಯಾಕೇಜ್‍ಗೆ 2283 ಕೋಟಿ ರೂ. ಆಗಿದ್ದು, ಶೇ.50.5ರಷ್ಟು ಕಾಮಗಾರಿ ಪೂರ್ಣವಾಗಿದೆ.

ಕೋವಿಡ್ ಹಿನ್ನೆಲೆಯಲ್ಲಿ ಎರಡೂ ಪ್ಯಾಕೇಜ್‍ಗೆ ಕಾಮಗಾರಿ ಕಾಲಾವಧಿಯನ್ನು ಮೂರು ತಿಂಗಳು ವಿಸ್ತರಣೆ ಮಾಡಲಾಗಿದೆ. ಎರಡು ಪ್ಯಾಕೇಜ್‍ಗಳ ಯೋಜನಾ ವರದಿ 30 ತಿಂಗಳಾಗಿರುತ್ತದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೇ ಇದರ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದರು. ಅವಧಿ ಮುಗಿದಿರುವ ಟೋಲ್‍ಗಳಲ್ಲಿ ಟೋಲ್ ತೆರವುಗೊಳಿಸುವಂತೆ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.


Spread the love

About Laxminews 24x7

Check Also

ಮುಳುಗಿದ ಲೋಳಸೂರ ಸೇತುವೆ: ಡಿಸಿ ಮೊಹಮ್ಮದ್ ರೋಷನ್ ಪರಿಶೀಲನೆ

Spread the loveಬೆಳಗಾವಿ: ಘಟಪ್ರಭಾ ಹಾಗೂ ಮಾರ್ಕಂಡೇಯ ನದಿಗಳಿಂದ‌ ಮುಳುಗಡೆ ಆಗುವ ನಾಲ್ಕು ಸೇತುವೆಗಳನ್ನು ಹೊಸದಾಗಿ ನಿರ್ಮಿಸುವ ಯೋಜನೆ ಇದೆ. ಇದಕ್ಕೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ