ಗೋಕಾಕ : ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ವಾಹನ ಪಲ್ಟಿಯಾಗಿ, 6 ಜನರು ಗಾಯಗೊಂಡಿರುವ ಘಟನೆ ಅರಭಾವಿ ಗ್ರಾಮದ ಬಳಿ ಬುಧವಾರ ನಡೆದಿದೆ.

ಸಂಕೇಶ್ವರ -ಅರಬಾವಿ ರಾಜ್ಯ ಹೆದ್ದಾರಿಯಲ್ಲಿ ಘಟನೆ ನಡೆದಿದೆ. ಕ್ರೂಸರ್ ಚಾಲಕ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ತಕ್ಷಣ ಸ್ಥಳೀಯರು ಧಾವಿಸಿ, ಕಾರ್ ನಲ್ಲಿ ಸಿಲುಕಿಕೊಂಡವರನ್ನು ಹೊರ ತೆಗೆಯಲಾಗಿದೆ.
ಅದೃಷ್ಟವಶಾತ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ಗೋಕಾಕ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.
Laxmi News 24×7