ಬೆಂಗಳೂರು: ರಾಜ್ಯದಲ್ಲಿರುವ ಎಲ್ಲ ಕ್ವಾರಿಗಳಲ್ಲಿ ಸುರಕ್ಷತಾ ನಿಯಮಾವಳಿ ಪಾಲಿಸಲಾಗುತ್ತಿದೆಯೇ ಎಂಬ ಬಗ್ಗೆ ಸರ್ವೇ ನಡೆಸಿ ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಸಮಾಜ ಪರಿವರ್ತನಾ ಸಮಿತಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ್ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ಈ ನಿರ್ದೇಶನ ನೀಡಿದೆ.
ರಾಜ್ಯದಲ್ಲಿರುವ ಕ್ವಾರಿಗಳ ಸರ್ವೇ ನಡೆಸಿ ಸುರಕ್ಷತಾ ನಿಯಮಾವಳಿ ಪಾಲಿಸ ಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸ ಬೇಕು. ಒಂದೊಮ್ಮೆ ನಿಯಮಗಳನ್ನು ಪಾಲಿಸದಿದ್ದರೆ ಅವುಗಳ ವಿರುದ್ಧ ಕ್ರಮ ಕೈಗೊಂಡು ಒಂದು ತಿಂಗಳೊಳಗೆ ವರದಿ ಸಲ್ಲಿಸಬೇಕು. ಅಕ್ರಮ ಕಲ್ಲು ಗಣಿಗಾರಿಕೆ ಸಂಬಂಧ ಜನ ದೂರು ನೀಡಲು ಮತ್ತು ಅದನ್ನು ಪರಿಗಣಿಸಲು ವ್ಯವಸ್ಥೆ ರೂಪಿಸುವ ಕುರಿತು ಡಿ.12ರಂದು ನೀಡಿರುವ ನಿರ್ದೇಶನದ ಅನುಪಾಲನಾ ವರದಿ ಸಲ್ಲಿಸಬೇಕು ಎಂದು ಸರಕಾರಕ್ಕೆ ಸೂಚಿಸಿದ ನ್ಯಾಯಪೀಠ, ವಿಚಾರಣೆಯನ್ನು ಮಾ. 8ಕ್ಕೆ ಮುಂದೂಡಿತು.
Laxmi News 24×7