Breaking News

ಹಾವೇರಿಯ 86ನೇ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ.!!!

Spread the love

ಹಾವೇರಿ : ಯಾಲಕ್ಕಿ ನಗರಿ ಹಾವೇರಿಯಲ್ಲಿ ಇದೇ ಫೆ.26ರಿಂದ 28ರವರೆಗೆ ನಡೆಯಬೇಕಿದ್ದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆಯಾಗುವ ಸಾಧ್ಯತೆ ದಟ್ಟವಾಗಿದೆ.

ಕೊರೊನಾ ಆತಂಕದ ನಡುವೆ ವಿವಿಧ ಸಿದ್ಧತೆಗಳನ್ನು ಕನ್ನಡ ಸಾಹಿತ್ಯ ಪರಿಷತ್ತು ಮಾಡಿಕೊಳ್ಳುತ್ತಿದೆ. ಆದರೆ, ಸರ್ಕಾರದಿಂದ ಅನುದಾನ ಮಂಜೂರಾಗದಿರುವುದು, ಸಿದ್ಧತೆಗೆ ಸಮಯ ಕಡಿಮೆ ಇರುವುದರಿಂದಾಗಿ ನಿರ್ಧಾರಿತ ದಿನಾಂಕದಂದು ಸಾಹಿತ್ಯ ಸಮ್ಮೇಳನ ನಡೆಸುವುದು ಅಸಾಧ್ಯ ಎಂದು ಹೇಳಲಾಗುತ್ತಿದೆ.

ರಾಜ್ಯ ಸರ್ಕಾರ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನೇನು 20 ದಿನಗಳು ಉಳಿದೆ. ಇಲ್ಲಿಯವರೆಗೂ ಅನುದಾನ ನೀಡದೆ ಇರುವುದು ಕನ್ನಡ ಸಾಹಿತ್ಯ ಕಡೆಗೆ ನಿರ್ಲಕ್ಷ್ಯ ತೋರುತ್ತದೆ ಎನ್ನುವುದು ತಿಳಿಯುತ್ತದೆ ಎಂದು ಸಾಹಿತ್ಯಾಸಕ್ತರು ಬೇಸರ ವ್ಯಕ್ತ ಪಡಿಸಿದ್ದಾರೆ.

ಅನುದಾನ ಬಿಡುಗಡೆ ಮಾಡಿದ್ರೆ, ಅವಸರವಸರವಾಗಿ ಸಾಹಿತ್ಯ ಸಮ್ಮೇಳನ ನಡೆಸಲು ಅಸಾಧ್ಯವಾಗಿದೆ. ಕನಿಷ್ಠ 20-25 ದಿನ ಮುಂದೂಡುವಂತೆ ಸ್ವಾಗತ ಸಮಿತಿ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.


Spread the love

About Laxminews 24x7

Check Also

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the loveಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ