Breaking News

ಕೋರ್ಟ್ ಆವರಣದಲ್ಲಿ ಸಾಹಿತಿ ಕೆ.ಎಸ್ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ

Spread the love

ಬೆಂಗಳೂರು, : ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆನ್ನಲಾದ ಚಿಂತಕ, ಹಿರಿಯ ಸಾಹಿತಿ ಕೆ.ಎಸ್ ಭಗವಾನ್ ಅವರ ಮುಖಕ್ಕೆ ಬಿಜೆಪಿ ಕಾರ್ಯಕರ್ತೆ, ವಕೀಲೆಯೊಬ್ಬರು ಮಸಿ ಬಳಿದ ಘಟನೆ ನಗರದ 2ನೇ ಎಸಿಎಂಎಂ ನ್ಯಾಯಾಲಯದ ಆವರಣದಲ್ಲಿ ಇಂದು ಮದ್ಯಾಹ್ನ ನಡೆದಿದೆ.

ವಕೀಲೆ ಮೀರಾ ರಾಘವೇಂದ್ರ ಅವರು ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿದ್ದು, ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇಲೆ ಈ ಕೃತ್ಯ ಎಸಗಲಾಗಿದೆ ಎಂದು ತಿಳಿದುಬಂದಿದೆ.

ಭಗವಾನ್ ಅವರ ವಿರುದ್ಧ ಹಿಂದೂ ಧರ್ಮದ ಬಗ್ಗೆ ನೀಡಿದ ಹೇಳಿಕೆ ಸಂಬಂಧ ದೂರು ದಾಖಲಾಗಿತ್ತು. ಪ್ರಕರಣ ಸಂಬಂಧ ಭಗವಾನ್ ರವರು ಇಂದು ಕೋರ್ಟ್‌ಗೆ ಹಾಜರಾಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಅವರು ಕೋರ್ಟ್‌ನಿಂದ ಹೊರಗೆ ಬಂದಾಗ ಮೀರಾ ರಾಘವೇಂದ್ರ ಮುಖಕ್ಕೆ ಮಸಿ ಬಳಿದಿದ್ದಾರೆ.

ಈ ಬಗ್ಗೆ ಸ್ವತಃ ಮೀರಾ ರಾಘವೇಂದ್ರ ಅವರು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿದ್ದು, ”ಬುದ್ಧಿಜೀವಿ, ಧರ್ಮ ವಿರೋಧಿ ಫ್ರೊ.ಭಗವಾನ್ ಇಂದು ಕೋರ್ಟ್ ಕಟಕಟೆಗೆ ಹಾಜರಾಗಿ ಜಾಮೀನು ಪಡೆದುಕೊಂಡರು. ಅವರಿಗೆ ಮಸಿ ಬಳಿದು ತಕ್ಕ ಶಾಸ್ತಿ ಮಾಡಿದ್ದೇನೆ. ಜೈಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ.

ಘಟನೆ ಸಂಬಂಧ ಭಗವಾನ್ ಅವರು ಮೀರಾ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.


Spread the love

About Laxminews 24x7

Check Also

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ರಾಮಲಿಂಗಾರೆಡ್ಡಿ ಭೇಟಿ: ಅಭಿವೃದ್ಧಿ ಯೋಜನೆಗಳ ಅವಲೋಕನ

Spread the love ಸುಬ್ರಹ್ಮಣ್ಯ, ದಕ್ಷಿಣ ಕನ್ನಡ: ಇಲ್ಲಿನ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ