Breaking News

ಕೃಷಿ ಕಾಯ್ದೆ ಖಂಡಿಸಿ ಇಂದು ರೈತರಿಂದ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ಹೆದ್ದಾರಿ ಬಂದ್‌

Spread the love

ಬೆಂಗಳೂರು/ಹೊಸದಿಲ್ಲಿ : ಕೃಷಿ ಕಾಯ್ದೆಗಳನ್ನು ಖಂಡಿಸಿ ಶನಿವಾರ ಕರ್ನಾಟಕ ಸಹಿತ ದೇಶವ್ಯಾಪಿಯಾಗಿ ರೈತ ಸಂಘಟನೆಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ಬಂದ್‌ ನಡೆಸಲಿವೆ.

ರಾಷ್ಟ್ರ ಮಟ್ಟದಲ್ಲಿ ಕಿಸಾನ್‌ ಮೋರ್ಚಾ ಸೇರಿ ಹಲವು ರೈತ ಸಂಘನೆಗಳು ಹೆದ್ದಾರಿ ಬಂದ್‌ನಲ್ಲಿ ಭಾಗಿ ಆಗಲಿದ್ದು, ರಾಜ್ಯದಲ್ಲಿ ಸಂಯುಕ್ತ ಹೋರಾಟ -ಕರ್ನಾಟಕ ವೇದಿಕೆ ಕಾರ್ಯಕರ್ತರು, ರೈತರ ಜತೆಗೂಡಿ ಹಲವು ಕಡೆ ರಸ್ತೆ ತಡೆ ನಡೆಸಲಿದ್ದಾರೆ. ಹಾಗೆಯೇ ರಸ್ತೆ ಮಧ್ಯೆ ಊಟ ಸಿದ್ಧಪಡಿಸಿ ಸೇವಿಸಲಿದ್ದಾರೆ.

ಎಲ್ಲೆಲ್ಲಿ ಚಕ್ಕಾ ಜ್ಯಾಮ್‌?
ಉತ್ತರ, ಮಧ್ಯ ಕರ್ನಾಟಕ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೆದ್ದಾರಿ ತಡೆ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘದ ಮುಖಂಡ ಬಡಗಲಾಪುರ ನಾಗೇಂದ್ರ ಎಚ್ಚರಿಸಿದ್ದಾರೆ. ಆದರೆ ಕರಾ ವಳಿಯಲ್ಲಿ ಬಂದ್‌ ಸಾಧ್ಯತೆ ಕಡಿಮೆ.

ದಿಲ್ಲಿ ಗಡಿಯಲ್ಲಿ ಸರ್ಪಗಾವಲು
ರೈತರು ಶನಿವಾರ ಚಕ್ಕಾ ಜ್ಯಾಮ್‌ ನಡೆಸಲು ನಿರ್ಧರಿಸಿ ರುವ ಹಿನ್ನೆಲೆಯಲ್ಲಿ ದಿಲ್ಲಿಯ ಪ್ರತಿಭಟನ ಸ್ಥಳ ಗಳ ಸಮೀಪ ಪೊಲೀಸರು ಬಿಗಿ ಭದ್ರತೆ ಏರ್ಪಡಿಸಿದ್ದಾರೆ. ಜ. 26ರ ಮಾದರಿಯ ಹಿಂಸಾ ಚಾರ ನಡೆಯದಂತೆ ತಡೆಯಲು ಈ ಮಟ್ಟದ ಕಟ್ಟೆಚ್ಚರ ವಹಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವದಂತಿ ಹಬ್ಬಿಸುವವರ ಮೇಲೆ ಕ್ರಮ ಕೈಗೊಳ್ಳುವ ಸಲುವಾಗಿ ಸಾಮಾಜಿಕ ಜಾಲತಾಣಗಳ ಮೇಲೂ ಕಣ್ಣಿಡಲಾಗಿದೆ. ದಿಲ್ಲಿ-ಎನ್‌ಸಿಆರ್‌ ಪ್ರದೇಶ, ಉತ್ತರಪ್ರದೇಶ ಮತ್ತು ಉತ್ತರಾಖಂಡಗಳಲ್ಲಿ ಹೆದ್ದಾರಿ ತಡೆ ನಡೆಸುವುದಿಲ್ಲ ಎಂದು ರೈತರು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ

Spread the love ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ‌ ಮಧ್ಯೆ ಬೇಕಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ