Breaking News

ರಾಜ್ಯದ ‘ಬಿಪಿಎಲ್ ಕಾರ್ಡ್’ದಾರರಿಗೆ ಗುಡ್ ನ್ಯೂಸ್ : ಏ.1ರಿಂದ ಅಕ್ಕಿ ಜೊತೆಗೆ ಜೋಳ, ರಾಗಿ, ಹೆಸರುಬೇಳೆ, ತೊಗರಿಬೇಳೆ ವಿತರಣೆ

Spread the love

ಬೆಳಗಾವಿ : ರಾಜ್ಯದ ಬಿಪಿಎಲ್ ಪಡಿತರದಾರರಿಗೆ ಆಹಾರ ಭದ್ರತೆ ಯೋಜನೆಯಡಿ ಅಕ್ಕಿಯ ಜೊತೆಗೆ ಜೋಳ, ಹೆಸರುಬೇಳೆ, ತೊಗರಿ ಹಾಗೂ ರಾಗಿ ವಿತರಿಸಲಾಗುತ್ತದೆ ಎಂಬುದಾಗಿ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ತಿಳಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.

ಈ ಕುರಿತಂತೆ ನಗರದಲ್ಲಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಹಾರ ಭದ್ರತೆ ಯೋಜನೆಯ ಅಡಿಯಲ್ಲಿ ಬಿಪಿಎಲ್ ಕಾರ್ಡ್ ದಾರರಿಗೆ 5 ಕೆಜಿ ಅಕ್ಕಿ ಜೊತೆಗೆ, ಇತರೆ ಧಾನ್ಯ ವಿತರಿಸುವಂತ ಯೋಜನೆ ಇದೆ. ಹೀಗಾಗಿ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ಜೋಳ, ತೊಗಲಿ, ಹೆಸರುಬೇಳೆ ವಿತರಿಸಲಾಗುತ್ತದೆ ಎಂದು ತಿಳಿಸಿದರು.

ಇನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಅಕ್ಕಿ ಜೊತೆಗೆ ಜೋಳ, ತೊಗರಿ ಹೆಸರು ಬೇಳೆ ವಿತರಿಸಿದ್ರೇ, ದಕ್ಷಿಣ ಕರ್ನಾಟಕ ಭಾಗದವರಿಗೆ ಅಕ್ಕಿಯ ಜೊತೆಗೆ ರಾಗಿ, ಹೆಸರು, ತೊಗರಿ ವಿತರಿಸಬೇಕು ಎಂಬ ಯೋಜನೆ ಹಾಕಿದ್ದೇವೆ. ಏಪ್ರಿಲ್ 1ರಿಂದ ಈ ಯೋಜನೆ ಜಾರಿಗೆ ತರಲಾಗುತ್ತದೆ ಎಂಬುದಾಗಿ ತಿಳಿಸಿದರು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ