ಬೆಳಗಾವಿ : ಕೊರೊನಾ ಸೋಂಕಿಗೆ ಸಂಬಂಧಿಸಿದಂತೆ ಇತ್ತೀಚೆಗೆ ಹೊಸದಾಗಿ ಪ್ರಯೋಗಾಲಯಕ್ಕೆ ಕಳಿಸಲಾಗಿದ್ದ ಒಟ್ಟು 8 ಮಾದರಿಗಳ ಪೈಕಿ, 5 ವರದಿಗಳು ನೆಗೆಟಿವ್ ಬಂದಿರುತ್ತವೆ ಎಂದು ಜಿಲ್ಲಾಧಿಕಾರಿ ಡಾ.ಎಸ್. ಬಿ.ಬೊಮ್ಮನಹಳ್ಳಿ ಸ್ಪಷ್ಟ ಪಡಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಎಂಟು ಮಾದರಿಗಳ ಪೈಕಿ ಇನ್ನು ಮೂರು ಮಾದರಿಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇದುವರೆಗೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿರುವ ಒಟ್ಟಾರೆ ೨೧ ಮಾದರಿಗಳ ಪೈಕಿ ಇದೀಗ ಒಟ್ಟಾರೆ ೧೮ ನೆಗೆಟಿವ್ ಬಂದಿರುತ್ತವೆ.
ಜನರು ವದಂತಿಗಳಿಗೆ ಕಿವಿಗೊಡದೇ ಸರ್ಕಾರದ ಸೂಚನೆ ಮೇರೆಗೆ ಎಲ್ಲ ರೀತಿಯ ಮುನ್ನೆಚ್ವರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಬೊಮ್ಮನಹಳ್ಳಿ ಅವರು ತಿಳಿಸಿದ್ದಾರೆ.