Breaking News

ಗೃಹ ಸಚಿವ ಅಮಿತ್‌ ಶಾ ಧೌಲಿಗಂಗಾ ಪ್ರವಾಹ ಸ್ಥಳಕ್ಕೆ ಭೇಟಿ

Spread the love

ಉತ್ತರಾಖಂಡ: ಧೌಲಿಗಂಗಾ ನದಿಯಲ್ಲಿ ದಿಢೀರ್ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿ 150ಕ್ಕೂ ಹೆಚ್ಚು ಮಂದಿ ಕೊಚ್ಚಿ ಹೋಗಿದ್ದಾರೆ. ಪೋನ್‌ ಮೂಲಕ ದುರಂತದ ಮಾಹಿತಿ ಪಡೆದಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಇಂದು ಸಂಜೆ ವೇಳೆಗೆ ಘಟನಾ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಗೃಹ ಸಚಿವರು, ‘ಉತ್ತರಾಖಂಡದಲ್ಲಿ ಸಂಭವಿಸಿದ ನೈಸರ್ಗಿಕ ವಿಕೋಪದ ಕುರಿತು ನಾನು ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ಅವ್ರ ಬಳಿ ಮಾಹಿತಿ ಪಡೆದುಕೊಂಡಿದ್ದೇನೆ. ಅವರು ಐಟಿಬಿಪಿ ಡಿಜಿ ಮತ್ತು ಎನ್‌ಡಿಆರ್‌ಎಫ್ ಡಿಜಿ ಜೊತೆ ಮಾತನಾಡಿದ್ದಾರೆ. ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳು ಸಂತ್ರಸ್ತರ ಪ್ರಾಣ ಉಳಿಸಲು ಸಮರೋಪಾಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಎನ್​ಡಿಆರ್​ಎಫ್​ ಪಡೆಗಳು ರಕ್ಷಣಾ ಕಾರ್ಯಕ್ಕೆ ಇಳಿದಿವೆ. ದೇವಭೂಮಿ ರಕ್ಷಣೆಗೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು’ ಎಂದಿದ್ದಾರೆ.


Spread the love

About Laxminews 24x7

Check Also

ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತ

Spread the loveನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಇಂದು (ಸೋಮವಾರ) ಮೊದಲ ಬಾರಿಗೆ ಸಂಸತ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ