ವಿಜಯಪುರ (ಫೆ. 7): ರಾಮ ಮಂದಿರ ನಿರ್ಮಾಣದ ಕನಸು ಇದೀಗ ನನಸಾಗುತ್ತಿದೆ. ಇನ್ನು ಕಾಶಿ ಮತ್ತು ಮಥುರಾಗಳಲ್ಲಿ ಮಂದಿರ ನಿರ್ಮಾಣ ಬಾಕಿ ಇದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದ್ದಾರೆ. ವಿಜಯಪುರದಲ್ಲಿ ಶ್ರೀರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಚ್ ಪರವಾಗಿ ಆಯೋಜಿಸಲಾಗಿದ್ದ ನಿಧಿ ಸಮರ್ಪಣಾ ಮಹಾ ಅಭಿಯಾನದ ಸಭೆಯಲ್ಲಿ ಅವರು ರಾಮ ಮಂದಿರ ನಿರ್ಮಾಣಕ್ಕೆ ರೂ. 5 ಲಕ್ಷ ದೇಣಿಗೆ ನೀಡಿ ಮಾತನಾಡಿದರು.
ಎಲ್ಲವೂ ಅಂದುಕೊಂಡಂತೆ ಈಗ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗುತ್ತಿದೆ. ಆದರೆ, ಈಗ ಕಾಶಿಯಲ್ಲಿ ವಿಶ್ವನಾಥ ಮಂದಿರ ನಿರ್ಮಾಣವಾಗಬೇಕಿದೆ. ಮಥುರಾದಲ್ಲಿ ಶ್ರೀಕೃಷ್ಣನ ಜನ್ಮಸ್ಥಳವನ್ನು ಮುಕ್ತ ಮಾಡಬೇಕಿದೆ. ಇದಕ್ಕೆ ಅಯೋಧ್ಯೆಯಷ್ಟು ಹೋರಾಟ ಬೇಕಾಗಿಲ್ಲ. ಈಗ ಇಡೀ ದೇಶದಲ್ಲಿ ಕೇಂದ್ರ ಸರಕಾರದಿಂದ ಹಿಡಿದು ರಾಷ್ಟ್ರಪತಿಯ ವರೆಗೆ ಎಲ್ಲರೂ ನಮ್ಮವರೇ ಇದ್ದಾರೆ. ಹೀಗಾಗಿ ಕಾಶಿ ಮತ್ತು ಮಥುರಾಗಳಲ್ಲಿಯೂ ಮಂದಿರ ನಿರ್ಮಾಣವಾಗಬೇಕಿದೆ ಎಂದು ಯತ್ನಾಳ್ ತಿಳಿಸಿದರು.
Laxmi News 24×7