Breaking News

ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

Spread the love

ಶಿಲ್ಲಾಂಗ್: ದೇಶದಲ್ಲಿ ತೈಲೋತ್ಪನ್ನಗಳ ದರಗಳು ಏರಿಕೆಯಾಗಿದ್ದು, ದೇಶಾದ್ಯಂತ ಜನರು ಈ ಬಗ್ಗೆ ಕಿಡಿ ಕಾರುತ್ತಿದ್ದಾರೆ. ಈ ನಡುವೆ ಮೇಘಾಲಯ ಸರ್ಕಾರ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಕಡಿತಗೊಳಿಸಿದೆ.

ಹೌದು ಈ ಬಗ್ಗೆ ಮೇಘಾಲಯ ಮುಖ್ಯಮಂತ್ರಿ ಕನ್ರಾಡ್ ಸಂಗ್ಮಾ ಮಾಹಿತಿ ನೀಡಿದ್ದು, ರಾಜ್ಯದ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಸೋಮವಾರ ಮಧ್ಯರಾತ್ರಿಯಿಂದ 2 ರೂ.ಗೆ ಇಳಿಸಲು ಮೇಘಾಲಯ ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

‘ಮೇಘಾಲಯದಲ್ಲಿ ಇತ್ತೀಚೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಎರಡರ ದರವನ್ನೂ ಪ್ರತಿ ಲೀಟರ್ ಗೆ ತಲಾ 2 ರೂಪಾಯಿ ಕಡಿತಗೊಳಿಸಲಾಗುವುದು. ನೂತನ ದರಗಳು 2021 ಫೆಬ್ರವರಿ 8 ರ ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಸಂಗ್ಮಾ ಮಾಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ