Breaking News

ಬೆಳಗಾವಿ ಲೋಕಸಭೆ ಉಪಚುನಾವಣೆ: ಮತಗಟ್ಟೆಗಳ ತಯಾರಿ ನಡೆಸಿರುವ ಅಧಿಕಾರಿಗಳು

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗಾಗಿ ಮತಗಟ್ಟೆಗಳನ್ನು ತಯಾರಿಸುವ ಕಾರ್ಯವನ್ನು ಜಿಲ್ಲಾಡಳಿತ ಆರಂಭಿಸಿದೆ.

ಚುನಾವಣಾ ದಿನಾಂಕ ಘೋಷಣೆಗೆ ಕ್ಷಣಗಣನೆ ಆರಂಭವಾಗಿದೆ ಎನ್ನಲಾಗುತ್ತಿದ್ದು, ಚುನಾವಣಾ ಆಯೋಗದ ಸೂಚನೆಯಂತೆ ಅಧಿಕಾರಿಗಳು, ವಿವಿಧ ಸರ್ಕಾರಿ ಶಾಲೆಗಳಿಗೆ ಭಾನುವಾರ ಭೇಟಿ ನೀಡಿ ಅಲ್ಲಿನ ಮೂಲ ಸೌಲಭ್ಯಗಳು ಮತ್ತು ಮತಗಟ್ಟೆಯಾಗಿ ಪರಿವರ್ತಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರು.

ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ ಅಂಗಡಿ ಅವರು ಸೆ. 23ರಂದು ಕೋವಿಡ್‌ನಿಂದಾಗಿ ದೆಹಲಿಯ ಏಮ್ಸ್‌ನಲ್ಲಿ ನಿಧನರಾಗಿದ್ದರು. ನಿಯಮದ ಪ್ರಕಾರ ಆರು ತಿಂಗಳೊಳಗೆ ಚುನಾವಣೆ ನಡೆಸಬೇಕು. ಈ ನಿಟ್ಟಿನಲ್ಲಿ ಶೀಘ್ರದಲ್ಲೇ ಚುನಾವಣೆ ದಿನಾಂಕ ಘೋಷಣೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.


Spread the love

About Laxminews 24x7

Check Also

ಅಕ್ರಮ ಎಸಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯ

Spread the loveಬೆಳಗಾವಿ: ಮಹಾನಗರ ಪಾಲಿಕೆ 8 ಮತ್ತು 9 ವಾರ್ಡ್‌ನಲ್ಲಿನ  ಆಸ್ತಿಗಳಿಗೆ ಮತ್ತೊಬ್ಬರ ಹೆಸರಿನಲ್ಲಿ ಬಾಂಡ್ ಆಧಾರದ ಮೇಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ