Breaking News

ಇಂದಿರಾ ಕ್ಯಾಂಟಿನ್ ರದ್ದಾದರೆ ಜನ ಶಾಪ ಹಾಕುತ್ತಾರೆ. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರ

Spread the love

ಬೆಂಗಳೂರು, ಫೆ.8- ಬಡವರ ಹಸಿವು ನೀಗಿಸುವ ಉದ್ದೇಶದಿಂದ ಸಿದ್ದರಾಮಯ್ಯ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟಿನ್‍ಗಳಿಗೆ ಬೀಗ ಜಡಿಯುವ ಕಾಲ ಸನ್ನಿಹಿತವಾಗಿದೆ. ಕಳೆದ ಏಪ್ರಿಲ್ 2020 ರಿಂದ ಈವರೆಗೂ ಇಂದಿರಾ ಕ್ಯಾಂಟಿನ್‍ಗಳಿಗೆ ಬಿಡುಗಡೆ ಮಾಡಬೇಕಾದ 22 ಕೋಟಿ ಅನುದಾನವನ್ನು ಬಿಬಿಎಂಪಿ ತಡೆ ಹಿಡಿದಿರುವುದರಿಂದ ಕೆಲವೇ ದಿನಗಳಲ್ಲಿ ಕ್ಯಾಂಟಿನ್‍ಗಳನ್ನು ರದ್ದುಗೊಳಿಸಲು ಗುತ್ತಿಗೆದಾರರು ತೀರ್ಮಾನಿಸಿದ್ದಾರೆ.198 ವಾರ್ಡ್‍ಗಳಲ್ಲಿ ಸ್ಥಾಪಿಸಲಾಗಿದ್ದ ಇಂದಿರಾ ಕ್ಯಾಂಟಿನ್‍ಗಳು ಹಾಗೂ ಮೊಬೈಲ್ ಕ್ಯಾಂಟಿನ್‍ಗಳಲ್ಲಿ ಸಾರ್ವಜನಿಕರಿಗೆ 5ರೂ.ಗೆ ಬೆಳಗಿನ ತಿಂಡಿ ಹಾಗೂ 10ರೂ.ಗೆ ಮಧ್ಯಾಹ್ನ ಮತ್ತು ರಾತ್ರಿ ಊಟ ವಿತರಿಸಲಾಗುತ್ತಿತ್ತು. ಬಡವರಿಗೆ ಕಡಿಮೆ ದರದಲ್ಲಿ ಊಟ ಸಿಗುವಂತಾಗಬೇಕು ಎಂಬ ಉದ್ದೇಶದಿಂದ 2017 ಆಗಸ್ಟ್ 16ರಂದು ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿರಾ ಕ್ಯಾಂಟಿನ್ ಯೋಜನೆ ಆರಂಭಿಸಿದ್ದರು.

2018ರಲ್ಲಿ 24 ಮೊಬೈಲ್ ಕ್ಯಾಂಟಿನ್‍ಗಳಿಗೂ ಚಾಲನೆ ನೀಡಲಾಗಿತ್ತು. ಅಂದಿನಿಂದ ಇಂದಿನವರೆಗೂ ಲಕ್ಷಾಂತರ ಕಡುಬಡವರು ಹೊಟ್ಟೆ ತುಂಬ ಊಟ ಮಾಡುತ್ತಿದ್ದರು. ಅಂತಹ ಅನ್ನ ದಾಸೋಹ ಯೋಜನೆ ಈಗ ಅಂತ್ಯಗೊಳ್ಳುವ ಕಾಲ ಸನ್ನಿಹಿತವಾಗಿದ್ದು, ಅನುದಾನ ಬಿಡುಗಡೆ ಮಾಡದ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಡವರ ಹಸಿವು ನೀಗಿಸುತ್ತಿದ್ದ ಇಂದಿರಾ ಕ್ಯಾಂಟಿನ್ ರದ್ದಾದರೆ ಜನ ಶಾಪ ಹಾಕುತ್ತಾರೆ. ಇದು ಬಿಜೆಪಿ ಸರ್ಕಾರಕ್ಕೆ ಮುಜುಗರ ಉಂಟುಮಾಡಲಿದೆ. ಹೀಗಾಗಿ ಯಾವುದೇ ಕಾರಣಕ್ಕೂ ಇಂದಿರಾ ಕ್ಯಾಂಟಿನ್ ರದ್ದುಗೊಳಿಸಬಾರದು. ಅನುದಾನ ಬಿಡುಗಡೆ ಮಾಡಿ ಬಡವರ ಅನ್ನದಾಸೋಹ ಎಂದಿನಂತೆ ನಡೆದುಕೊಂಡು ಹೋಗಲು ಸಹಕರಿಸಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.


Spread the love

About Laxminews 24x7

Check Also

1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.

Spread the love1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು. ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ