Breaking News

ಒಂದೆರಡು ದಿನದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಘೋಷಣೆಯಾಗುವ ಸಾಧ್ಯತೆ

Spread the love

ಬೆಳಗಾವಿ – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮಂಗಳವಾರ ಅಥವಾ ಬುಧವಾರ ಘೋಷಣೆಯಾಗುವ ಸಾಧ್ಯತೆ ಇದೆ.

ಚುನಾವಣೆ ಆಯೋಗ ನಡೆಸುತ್ತಿರುವ ಸಿದ್ಧತೆಯನ್ನು ಗಮನಿಸಿದರೆ ಇನ್ನೆರಡು ದಿನದಲ್ಲೇ ದಿನಾಂಕ ಘೋಷಣೆಯಾಗುವ ಎಲ್ಲ ಲಕ್ಷಣಗಳು ಕಾಣಿಸುತ್ತಿದೆ.ಬೆಳಗಾವಿ ಲೋಕಸಭೆ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸುರೇಶ ಅಂಗಡಿ ಸೆಪ್ಟಂಬರ್ 23ರಂದು ನಿಧನರಾಗಿದ್ದಾರೆ.

ಅಲ್ಲಿಂದ 6 ತಿಂಗಳಲ್ಲಿ ಉಪಚುನಾವಣೆ ಪ್ರಕ್ರಿಯೆಗಳೆಲ್ಲ ಮುಗಿಯಬೇಕು ಎನ್ನುವುದು ನಿಯಮ. ಹಾಗಾಗಿ ಮಾರ್ಚ್ 23ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳ್ಳಬೇಕಿದೆ. ಅದಕ್ಕೆ ಇನ್ನಿರುವುದು ಹೆಚ್ಚುಕಡಿಮೆ 44 ದಿನ. ಹಾಗಾಗಿ ಇನ್ನು ಒಂದೆರಡು ದಿನದಲ್ಲಿ ಚುನಾವಣೆ ದಿನಾಂಕವನ್ನು ಚುನಾವಣೆ ಆಯೋಗ ಘೋಷಿಸಬಹುದು.


Spread the love

About Laxminews 24x7

Check Also

ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಅಮಾನತು

Spread the loveಪಾಟ್ನಾ: ಬಿಹಾರದಲ್ಲಿ  ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ವೇಳೆ AK-47 ಹಿಡಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ