Breaking News
Home / Uncategorized / ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ

ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ

Spread the love

ಬೆಂಗಳೂರು : ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಜೆಡಿಎಸ್‌ನ ಬಸವರಾಜ ಹೊರಟ್ಟಿ ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ಚುನಾವಣೆ ನಡೆಯಲಿದೆ.

ಸಂಖ್ಯಾಬಲದ ಪ್ರಕಾರ ಬಸವರಾಜ ಹೊರಟ್ಟಿ ಗೆಲುವು ಖಚಿತ. ಆದರೆ “ಮುಸ್ಲಿಂ ಅಭ್ಯರ್ಥಿ ಕಣದಲ್ಲಿದ್ದರೂ ಜೆಡಿಎಸ್‌ ಬಿಜೆಪಿಗೆ ಬೆಂಬಲ ನೀಡಿತು’ ಎಂಬ ಅಸ್ತ್ರ ಬಳಸಿಕೊಳ್ಳಲು ಕಾಂಗ್ರೆಸ್‌ ಅಹಮದ್‌ ಅವರನ್ನು ಕಣಕ್ಕೆ ಇಳಿಸಿದೆ.

ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಎಂ.ಟಿ.ಬಿ. ನಾಗರಾಜ್‌ ಜತೆಗೂಡಿ ಬಸವರಾಜ ಹೊರಟ್ಟಿ ಚುನಾವಣ ಅಧಿಕಾರಿಯೂ ಆಗಿರುವ ಪರಿಷತ್‌ ಕಾರ್ಯದರ್ಶಿ ಮಹಾಲಕ್ಷ್ಮೀ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ. ಅನಂತರ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಸೀರ್‌ ಅಹಮದ್‌ ನಾಮಪತ್ರ ಸಲ್ಲಿಸಿದರು.

ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್‌, ಮಾಜಿ ಸಚಿವ ಜಮೀರ್‌ ಅಹಮದ್‌, ವಿಪಕ್ಷದ ಸಚೇತಕ ನಾರಾಯಣಸ್ವಾಮಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಲೋಕಸಭಾ ಚುನಾವಣೆ: ಸಂಜೆ 5 ಗಂಟೆಯವರೆಗೆ ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ? ಇಲ್ಲಿದೆ ಮಾಹಿತಿ

Spread the loveಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ 2ನೇ ಹಂತದ ಮತದಾನ ನಡೆಯುತ್ತಿದ್ದು, ಮತದಾನ ಪ್ರಕ್ರಿಯೆ ಮುಗಿಯಲು ಕೆಲವೇ ಹೊತ್ತು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ