Breaking News

BIG NEWS : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15, 16ರಂದು ‘ಭಾರತದಾದ್ಯಂತ ಬ್ಯಾಂಕ್‌ಗಳ ಮುಷ್ಕರ

Spread the love

ನವದೆಹಲಿ: ಒಂಬತ್ತು ಒಕ್ಕೂಟಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಾರ್ಚ್ ನಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಆರಂಭಿಸಲಾಗುತ್ತದೆ ಎಂದು ಯುಎಫ್ ಬಿಯು ತಿಳಿಸಿದೆ.

ಮಂಗಳವಾರ ನಡೆದ ಯುಎಫ್ ಬಿಯು ಸಭೆಯಲ್ಲಿ ಬ್ಯಾಂಕ್ ಗಳ ಖಾಸಗೀಕರಣದ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ ತಿಳಿಸಿದ್ದಾರೆ.

ಅಂದ ಹಾಗೇ UFBUನ ಸದಸ್ಯರಲ್ಲಿ ಆಲ್ ಇಂಡಿಯಾ ಬ್ಯಾಂಕ್ ನೌಕರರ ಸಂಘ (AIBEA), ಆಲ್ ಇಂಡಿಯಾ ಬ್ಯಾಂಕ್ ಅಧಿಕಾರಿಗಳ ಕಾನ್ಫೆಡರೇಷನ್ (AIBOC), ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (NCBE), ಆಲ್ ಇಂಡಿಯಾ ಬ್ಯಾಂಕ್ ಅಧಿಕಾರಿಗಳ ಸಂಘ (AIBOA) ಮತ್ತು ಬ್ಯಾಂಕ್ ನೌಕರರ ಕಾನ್ಫೆಡರೇಷನ್ ಆಫ್ ಇಂಡಿಯಾ (BEFI) ಸೇರಿವೆ. ಇತರೆಗಳೆಂದರೆ ಇಂಡಿಯನ್ ನ್ಯಾಷನಲ್ ಬ್ಯಾಂಕ್ ಎಂಪ್ಲಾಯನ್ಸ್ ಫೆಡರೇಶನ್ (INBEF), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಆಫೀಸರ್ಸ್ ಕಾಂಗ್ರೆಸ್ (INBOC), ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ವರ್ಕರ್ಸ್ (NOBW) ಮತ್ತು ನ್ಯಾಷನಲ್ ಆರ್ಗನೈಸೇಷನ್ ಆಫ್ ಬ್ಯಾಂಕ್ ಆಫೀಸರ್ಸ್ (NOBO). (ಪಿಟಿಐ ಇನ್ ಪುಟ್ ಗಳೊಂದಿಗೆ)

ಕಳೆದ ವಾರ ಕೇಂದ್ರ ಬಜೆಟ್ ಮಂಡನೆ ಮಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಸಾರ್ವಜನಿಕ ವಲಯದ ಎರಡು ಬ್ಯಾಂಕ್ ಗಳನ್ನು (ಪಿಎಸ್ ಬಿ) ಖಾಸಗೀಕರಣ ಗೊಳಿಸುವುದಾಗಿ ಘೋಷಿಸಿದ್ದರು. ಸರ್ಕಾರ ಈಗಾಗಲೇ ಐಡಿಬಿಐ ಬ್ಯಾಂಕ್ ಅನ್ನು ಖಾಸಗೀಕರಣಗೊಳಿಸಿದೆ, ಕಳೆದ ನಾಲ್ಕು ವರ್ಷಗಳಲ್ಲಿ 14 ಸಾರ್ವಜನಿಕ ವಲಯದ ಬ್ಯಾಂಕ್ ಗಳನ್ನು ವಿಲೀನಮಾಡಿದೆ.


Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ