Breaking News

ದಲಿತರು, ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ; ಸಿದ್ದರಾಮಯ್ಯ ಎಚ್ಚರಿಕೆ

Spread the love

ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ ಸಿಗುವುದಿದ್ದರೆ ಸಿಗಲಿ. ಕುರುಬರನ್ನು ಎಸ್​ಟಿಗೆ ಸೇರಿಸುವುದಕ್ಕೆ ನನ್ನ ವಿರೋಧ ಇಲ್ಲ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಕುರುಬರನ್ನು ಎಸ್​ಟಿಗೆ ಸೇರಿಸಿದರೆ ಮೋದಿಗೆ ಬೆಂಬಲ ಎಂಬ ಕುರುಬ ಸಮಾಜದ ಸ್ವಾಮೀಜಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ಇದು ಯಾರೋ ಒಬ್ಬರು ಮಾಡುವ ತೀರ್ಮಾನವಲ್ಲ. ಯಾವುದೋ ಸಭೆ ಸಮಾರಂಭದಲ್ಲಿ ಆಗುವ ತೀರ್ಮಾನ ಅಲ್ಲ. ಚುನಾವಣೆಯಲ್ಲಿ ಜನರು ತೀರ್ಮಾನ ಮಾಡುತ್ತಾರೆ. ಯಾರ ಪರ, ಯಾರ ವಿರೋಧ ಅನ್ನೋದು ಜನರ ತೀರ್ಪು ಎಂದು ತಿರುಗೇಟು ನೀಡಿದ್ದಾರೆ.


Spread the love

About Laxminews 24x7

Check Also

ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ರೈತ ಸಾವು – ಇನ್ನೋರ್ವ ಗಂಭೀರ

Spread the loveರಾಯಚೂರು: ಜಿಲ್ಲೆಯ ಸಿಂಧನೂರು  ತಾಲೂಕಿನ ಸುಲ್ತಾನಪುರ ಹತ್ತಿರದ ತೆಗ್ಗಿನ ಕ್ಯಾಂಪ್‌ನಲ್ಲಿ ಸಿಡಿಲು ಬಡಿದು ಓರ್ವ ರೈತ ಮೃತಪಟ್ಟಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ