Breaking News

ಕೃಷಿ ಕಾಯ್ದೆ ವಿರುದ್ಧ ನಕಲಿ ರೈತರ ಹೋರಾಟ

Spread the love

ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವುದು ನಕಲಿ ರೈತರ ಹೋರಾಟ. ವಿದೇಶಿ ಶಕ್ತಿಗಳ ಕಪಿಮುಷ್ಠಿಯಲ್ಲಿ ರೈತ ಮುಖಂಡರು ಸಿಲುಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.

ನಿಜವಾದ ರೈತರು ಹೋರಾಟ ನಡೆಸುತ್ತಿಲ್ಲ. ಕೆಲವು ಹಿತಾಸಕ್ತಿಗಳು ರೈತರ ದಾರಿ ತಪ್ಪಿಸುತ್ತಿವೆ. ಕೃಷಿ ಕಾಯ್ದೆಯಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ರೈತರ ಗೊಂದಲಗಳನ್ನು ನಿವಾರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಸುವ ಭರವಸೆ ನೀಡಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್, ಎಚ್‌.ಡಿ.ದೇವೇಗೌಡ ಕೃಷಿ ಕಾಯ್ದೆಗಳ ಕುರಿತು ಒಳ್ಳೆಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿರೋಧ ಪಕ್ಷಗಳಿಗೆ ಕಾಯ್ದೆಗಳ ಆಶಯವೇ ಅರ್ಥವಾಗುತ್ತಿಲ್ಲ. ವಿದೇಶಿಗರ ಕುತಂತ್ರ, ರಾಜಕೀಯ ಪಿತೂರಿ ಅರ್ಥವಾಗುತ್ತಿಲ್ಲ. ಎಲ್ಲ ಪಕ್ಷಗಳು ರಾಜಕಾರಣ ಬಿಟ್ಟು ಸ್ವಾಗತಿಸಬೇಕು. ರೈತರ ಹೆಸರಿನಲ್ಲಿ ನಡೆಸುತ್ತಿರುವ ದೇಶ ವಿದ್ರೋಹ ಶಕ್ತಿಗಳನ್ನು ಖಂಡಿಸಬೇಕು ಎಂದರು.


Spread the love

About Laxminews 24x7

Check Also

ಯಾದವಾಡದಲ್ಲಿ ಮೂಡಲಗಿ ಮತ್ತು ಗೋಕಾಕ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ*

Spread the love *ಅಕ್ರಮ ಸಾರಾಯಿ ಚಟುವಟಿಕೆಯ ಬಗ್ಗೆ ನೀಗಾ ವಹಿಸಿ, ಕಠಿಣ ಕ್ರಮಕ್ಕೆ ಮುಂದಾಗಿ- ಶಾಸಕ ಬಾಲಚಂದ್ರ ಜಾರಕಿಹೊಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ