ರಾಯಚೂರು: ನಾಲ್ಕು ರಾಜ್ಯಗಳಲ್ಲಿ ಅಸೆಂಬ್ಲಿ ಚುನಾವಣೆ ನಡೆಯಲಿದೆ. ನಾಲ್ಕೂ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ತಿಳಿಸಿದ್ದಾರೆ.
ರಾಯಚೂರಿನಲ್ಲಿ ಮಾತನಾಡಿದ ದೇವೇಗೌಡರು, ತಮಿಳುನಾಡಿನಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ ಸಿಗುವುದಿಲ್ಲ. ಕೇರಳದಲ್ಲಿ ಎಲ್ ಡಿಎಫ್ ಗೆ ಹೆಚ್ಚು ಶಕ್ತಿಯಿದೆ. ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಹಾಗೂ ಬಿಜೆಪಿ ನಡುವೆ ಭಾರೀ ಪೈಪೋಟಿ ನಡೆದಿದೆ. ಮತಗಳು ಕಡಿಮೆ ಬಂದರೂ ಈ ಬಾರಿ ಮಮತಾ ಬ್ಯಾನರ್ಜಿ ಮತ್ತೆ ಅಧಿಕಾರವನ್ನು ಪಡೆಯಬಹುದು. ಅವರ ಧೈರ್ಯ ಮೆಚ್ಚುವಂತದ್ದು ಎಂದರು.
ಇದೇ ವೇಳೆ ರಾಜ್ಯಸಭೆಯಲ್ಲಿ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಮಾಡಿದ ಭಾಷಣ ಮೆಲೆಕು ಹಾಕಿದ ದೇವೇಗೌಡರು, ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಲು ಗುಲಾಮ್ ನಬಿ ಅವರು ಕಾರಣ. ಕೆಲ ಕಾಂಗ್ರೆಸ್ಸಿಗರು ಬಿಜೆಪಿ ಜತೆ ಹೋಗಲು ಸಿದ್ಧರಿದ್ದರು ಎಂದು ಹೇಳಿದರು.
Laxmi News 24×7