Breaking News

‘ಮಿಠಾಯಿ ಕಂಡ ಮಗುವಿನಂತಾಗಿರುವ ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್’

Spread the love

ಮೈಸೂರು: ಸಿದ್ದರಾಮಯ್ಯ ಮಿಠಾಯಿ ಕಂಡ ಮಗುವಿನಂತಾಗಿದ್ದಾರೆ. ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಇದ್ದಂತೆ. ಟ್ರಂಪಾಯಣದಂತೆ ಸಿದ್ದರಾಮಾಯಣ ನಡೆಯುತ್ತಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನೋಡಿದಾಗ ಸಿಎಂ ಎಂಬ ಮಿಠಾಯಿ ನೆನಪಾಗುತ್ತದೆ. ಅದನ್ನು ಪಡೆಯಬೇಕೆಂದು ಚಡಪಡಿಸುತ್ತಾರೆ. ಹೀಗಾಗಿ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ಸೋಲನ್ನು ಒಪ್ಪಿಕೊಳ್ಳುವುದಕ್ಕೆ ಸಿದ್ದರಾಮಯ್ಯ ಸಿದ್ಧರಿಲ್ಲ, ಅವರದು ಕಾಂಗ್ರೆಸ್ ಸಂಸ್ಕಾರ, ಸಂಸ್ಕೃತಿ ಇಲ್ಲದ ಮನುಷ್ಯ, ಅಚಾನಕ್ ಆಗಿ ಸಿದ್ದರಾಮಯ್ಯರನ್ನು ಕಾಂಗ್ರೆಸ್​ಗೆ ಕರೆತಂದೆ. ಅದೃಷ್ಟದಿಂದ ಸಿದ್ದರಾಮಯ್ಯ ಮುಖ್ಯಮಂತ್ರಿಯಾದರು. ಅವರು ಯಾರ ಯಶಸ್ಸನ್ನೂ ಸಹಿಸುವುದಿಲ್ಲ. ಜೊತೆಗೆ ತಮ್ಮ ಸಮುದಾಯದ ಸ್ವಾಮೀಜಿಗಳ ಹೋರಾಟ ಸಹ ಸಹಿಸಲ್ಲ. ಇವರಿಗೆ ಸ್ವಾರ್ಥ ಬಿಟ್ಟರೆ ಬೇರೆ ಏನೂ ಗೊತ್ತಿಲ್ಲ ಎಂದು ಟೀಕಿಸಿದ್ದಾರೆ.

ನಾನು ಮತ್ತು ಸಿದ್ದರಾಮಯ್ಯ ಮೈಸೂರಿನಲ್ಲೇ ಓದಿದವರು. ಸಿದ್ದರಾಮಯ್ಯ ಯಾವ ವಿದ್ಯಾರ್ಥಿ ಹೋರಾಟದಲ್ಲೂ ಇರಲಿಲ್ಲ. ತಮ್ಮ ಅಭದ್ರತೆ ಮುಚ್ಚಿಕೊಳ್ಳಲು ಅಹಿಂದ ಬಳಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಯಾವ ಅಹಿಂದ ಹೋರಾಟವೂ ಇಲ್ಲ. ಸಿದ್ದರಾಮಯ್ಯ, ಮಹದೇವಪ್ಪರ ಸ್ವಾರ್ಥದ ಹೋರಾಟ ಎಂದು ಅಭಿಪ್ರಾಯ ಪಟ್ಟಿದ್ದಾರೆ.


Spread the love

About Laxminews 24x7

Check Also

ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ

Spread the love ಚಿಕ್ಕೋಡಿ ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕಛೇರಿ ಎದುರು ಕರವೇ ಪ್ರತಿಭಟನೆ ಗೋಕಾಕ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ