ಬೆಳಗಾವಿ: ಪಕ್ಷ ಬಯಸಿದ್ರೆ ಗೋಕಾಕ್ನಿಂದ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಟಾಂಗ್ ಕೊಟ್ಟಿದ್ದಾರೆ.
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ರಮೇಶ ಜಾರಕಿಹೊಳಿ ಟಾರ್ಗೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಶುಕ್ರವಾರ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ನನಗೆ ಉತ್ತರ ಕೊಡಲು ಜಾಸ್ತಿ ಹೊತ್ತು ಬೇಕಿಲ್ಲ. 2023ರಲ್ಲಿ ಜನರಿಂದ ಉತ್ತರ ಕೊಡಿಸಲು ಕಾಯುತ್ತಿದ್ದೇನೆ ಎಂದಿದ್ದಾರೆ.
ಗ್ರಾಮ ಪಂಚಾಯತಿ ಸದಸ್ಯರಿಗೆ ಬಿಜೆಪಿಯಿಂದ ಸನ್ಮಾನ ವಿಚಾರದ ಬಗ್ಗೆ ಮಾತನಾಡಿದ ಅವರು, ಸರ್ಕಾರವನ್ನು ಬಿಳಿಸಿದವರಿಗೆ ಗ್ರಾ.ಪಂ ಯಾವ ಲೆಕ್ಕ. ಎಂಎಲ್ಎಗಳನ್ನೆ ಎಸ್ಕೆಪ್ ಮಾಡಿದ್ದಾರೆ ಇವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ. ಕಾಲಾಯ ತಸ್ಮೈ ನಮಃ, ನಾನು ಗೋಕಾಕ್ ಅನ್ನು ಮುಂದಿನ ಚುನಾವಣೆಯಲ್ಲಿ ಟಾರ್ಗೆಟ್ ಮಾಡುತ್ತೇನೆ. ಪಕ್ಷ ಬಯಸಿದ್ರೆ ಗೋಕಾಕ್ನಲ್ಲಿ ನಾನೇ ಅಭ್ಯರ್ಥಿ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
Laxmi News 24×7