Breaking News

ಕೊರೊನಾ ಎಫೆಕ್ಟ್ – ಸಿಇಟಿ ಪರೀಕ್ಷೆ ಮುಂದೂಡಿಕೆ

Spread the love

ಬೆಂಗಳೂರು: ದೇಶದಲ್ಲಿ ಕೊರೊನಾ ಎಫೆಕ್ಟ್ ಜಾಸ್ತಿಯಾದ ಕಾರಣ ಮುಂದಿನ ತಿಂಗಳು ನಿಗದಿಯಾಗಿದ್ದ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ.

ಏಪ್ರಿಲ್ 22 ರಿಂದ 24ವರೆಗೆ ಸಿಇಟಿ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ ಕೊರೊನಾ ವೈರಸ್ ಭೀತಿಯಿಂದ ಪ್ರಧಾನಿ ಮೋದಿ ಅವರು ದೇಶವನ್ನು ಏಪ್ರಿಲ್ 14ವರೆಗೆ ಲಾಕ್‍ಡೌನ್ ಮಾಡಿದ್ದಾರೆ. ಕೊರೊನಾ ವೈರಸ್ ದೇಶದಲ್ಲಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ದಿನೇ ದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಈ ಹಿನ್ನೆಲೆಯಲ್ಲಿ ಸಿಇಟಿ ಪರೀಕ್ಷೆಯನ್ನು ಮುಂದೂಡಲಾಗಿದೆ

ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪತ್ರಿಕಾ ಹೇಳಿಕೆ ಹೊರಡಿಸಿದ್ದು, ಇದರಲ್ಲಿ ಸಿಇಟಿ ಪರೀಕ್ಷೆ ಮುಂದೂಡಲಾಗಿದೆ ಎಂದು ಹೇಳಿದೆ. ಜೊತೆಗೆ ಈ ಸಿಇಟಿ ಪರೀಕ್ಷೆಯ ಹೊಸ ವೇಳಾಪಟ್ಟಿಯನ್ನು ಮುಂದೆ ನಿಗದಿ ಮಾಡಲಾಗುತ್ತದೆ ಎಂದು ಕೆಇಎ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ