Breaking News

ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನ ಮಾತಿಗೆ ಅಷ್ಟೊಂದು ಡಿಮ್ಯಾಂಡ್ ಇದೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ:ಯತ್ನಾಳ್

Spread the love

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುರಿತಾಗಿ ಪದೇ ಪದೇ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿ ಮಾಡಿದೆ.

ಈ ಕುರಿತಾಗಿ ಪ್ರತಿಕ್ರಿಯೆ ನೀಡಿರುವ ಯತ್ನಾಳ್ ಅವರು, ಪಕ್ಷದ ನಾಯಕ ಅರುಣ್ ಸಿಂಗ್ ಅವರು ನೀಡಿದ ಹೇಳಿಕೆಯನ್ನು ಸ್ವಾಗತಿಸುತ್ತೇನೆ. ಅವರ ಹೇಳಿಕೆಗೆ ಬೇಕಾಗಿರುವ ಉತ್ತರ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ನನಗೆ ನೋಟಿಸ್ ನೀಡಲು ಭಾರಿ ಡಿಮ್ಯಾಂಡ್ ಇತ್ತು. ನನಗೆ ಯಾವುದೇ ನೋಟಿಸ್ ಬಂದಿಲ್ಲ. ನನ್ನ ಮಾತಿಗೆ ಅಷ್ಟೊಂದು ಡಿಮ್ಯಾಂಡ್ ಇದೆ ನೋಡಿ ಎಂದು ವ್ಯಂಗ್ಯವಾಡಿದ್ದಾರೆ. ನನ್ನನ್ನು ಮೂರು ಸಲ ಪಕ್ಷದಿಂದ ಉಚ್ಚಾಟನೆ ಮಾಡಿದ್ದಾರೆ. ನಾನು ಎಲ್ಲವನ್ನು ಎದುರಿಸುತ್ತೇನೆ. ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದೆ. ಅಮಿತ್ ಶಾ ಅವರು ನನ್ನನ್ನು ಪಕ್ಷಕ್ಕೆ ಕರೆದು ಅವಕಾಶ ನೀಡಿದ್ದರು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ