Breaking News

ರಾಮಮಂದಿರ ನಿರ್ಮಾಣಕ್ಕೆ ಇದುವರೆಗೂ ಸಂಗ್ರಹವಾಗಿರುವ ಒಟ್ಟು ಮತ್ತು 1,511 ಕೋಟಿ ರೂ

Spread the love

ಸೂರತ್: ರಾಮಜನ್ಮಭೂಮಿಯಲ್ಲಿ ನಿರ್ಮಾಣವಾಗುತ್ತಿರುವ ಮಂದಿರಕ್ಕೆ ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ದೇಶಾದ್ಯಂತ ದೇಣಿಗೆ ಸಂಗ್ರಹಿಸುತ್ತಿದ್ದು, ಇದುವರೆಗೂ 1,511 ಕೋಟಿ ರೂಪಾಯಿ ಸಂಗ್ರಹವಾಗಿರುವುದಾಗಿ ತಿಳಿದುಬಂದಿದೆ.

ದೇಗುಲ ನಿರ್ಮಾಣಕ್ಕೆ ಜನವರಿ 15ರಂದು ದೇಣಿಗೆ ಸಂಗ್ರಹ ಕಾರ್ಯ ಆರಂಭಗೊಂಡಿದ್ದು, ಫೆ.11ರ ಗುರುವಾರ ಸಂಜೆಯವರೆಗೂ 1,511ಕೋಟಿ ರೂಪಾಯಿ ಸಂಗ್ರಹವಾಗಿದೆ. ಫೆಬ್ರವರಿ 27ರವರೆಗೂ ಈ ಕಾರ್ಯ ಮುಂದುವರೆಯಲಿದೆ ಎಂದು ಟ್ರಸ್ಟ್‌ ಖಜಾಂಚಿ ಸ್ವಾಮಿ ಗೋವಿಂದ ದೇವ್ ಗಿ‌‍‌‍‌ರಿ ‌‍‌ಮಾಹಿತಿ ನೀಡಿದ್ದಾರೆ.

492 ವರ್ಷಗಳ ನಂತರ ಜನರಿಗೆ ಧರ್ಮಕ್ಕಾಗಿ ದೇಣಿಗೆ ನೀಡುವ ಇಂಥ ಅಪರೂಪದ ಅವಕಾಶ ಸಿಕ್ಕಿದೆ. ಈ ಪುಣ್ಯ ಕಾರ್ಯವಾದ ರಾಮ ಮಂದಿರ ನಿರ್ಮಾಣಕ್ಕಾಗಿ ಇಡೀ ದೇಶವೇ ದೇಣಿಗೆ ನೀಡುತ್ತಿದೆ. ದೇಣಿಗೆ ಕಾರ್ಯಕ್ಕೆ ದೇಶಾದ್ಯಂತ ನಾವು ನಾಲ್ಕು ಲಕ್ಷ ಗ್ರಾಮಗಳನ್ನು ಹಾಗೂ ಹನ್ನೊಂದು ಕೋಟಿ ಕುಟುಂಬಗಳನ್ನು ತಲುಪುವ ಗುರಿ ಇಟ್ಟುಕೊಂಡಿದ್ದೇವೆ ಎಂದು ಟ್ರಸ್ಟ್‌ನ ಸ್ವಾಮಿ ಗೋವಿಂದ್ ದೇವ ಗಿರಿ ಅವರು ತಿಳಿಸಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ