Breaking News

ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ

Spread the love

ಮೀರತ್: ಹುಟ್ಟುಹಬ್ಬದ ನೆಪದಲ್ಲಿ ಹುಡುಗಿಯನ್ನು ಹೋಟೆಲಿಗೆ ಕರೆಸಿಕೊಂಡು ಅತ್ಯಾಚಾರ ಎಸಗಿದ್ದ ಯುವಕನ ವಿರುದ್ಧ ಬಾಲಕಿ ಕುಟುಂಬದವರು ದೂರು ನೀಡಿದ್ದಾರೆ.

ಮೀರತ್ ನ ಮೆಡಿಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಐದು ದಿನಗಳ ಹಿಂದೆ ಘಟನೆ ನಡೆದಿದ್ದು, ಆರೋಪಿಗಳನ್ನು ಈಗ ಬಂಧಿಸಲಾಗಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳಿಸಲಾಗಿದೆ.

ಆದರೆ, ಬಂಧಿತ ಯುವಕನ ಪೋಷಕರು ಈ ಆರೋಪವನ್ನು ಅಲ್ಲಗಳೆದಿದ್ದಾರೆ. ಠಾಣೆಯಲ್ಲೇ ಪ್ರತಿಭಟನೆ ನಡೆಸಿ ಆಧಾರ ರಹಿತ ಆರೋಪ ಇದಾಗಿದ್ದು, ಯುವಕನನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದ್ದು, ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸ್ ಅಧಿಕಾರಿ ದೇವೇಶ್ ಸಿಂಗ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಕೆಪಿಎಸ್‌ಸಿ ನೇಮಕಾತಿ ಅಕ್ರಮ- ಎಸ್‌ಐಟಿ ರಚನೆಗೆ ಸುಪ್ರೀಂ ತಡೆ

Spread the loveನವದೆಹಲಿ: ರಾಜ್ಯದಲ್ಲಿ ತೀವ್ರ ಸಂಚಲನ ಮೂಡಿಸಿರುವ ಕೆಪಿಎಸ್‌ಸಿ  ನೇಮಕಾತಿ ಹಗರಣದ ತನಿಖೆಗೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ