Breaking News

ಗೋಕಾಕ : ಇಬ್ಬರು ಮಕ್ಕಳೊಂದಿಗೆ ಘಟಪ್ರಭಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ !

Spread the love

ಗೋಕಾಕ : ಮನೆಯಲ್ಲಿ ಜಗಳವಾಡಿ ಇಬ್ಬರು ಮಕ್ಕಳೊಂದಿಗೆ ಕಾಣೆಯಾಗಿದ್ದ ಮಹಿಳೆ ಘಟಪ್ರಭಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.

ಗೋಕಾಕ ತಾಲ್ಲೂಕಿನ ಅರಭಾಂವಿಯ ಸಾವಿತ್ರಿ ರಾಜು ಬನಾಜ(30), ಪೂಜಾ (4) ಲಕ್ಷ್ಮಿ (2), ಮೃತರು. ಮನೆಯಲ್ಲಿ ಜಗಳವಾಡಿ ತಮ್ಮಇಬ್ಬರು ಮಕ್ಕಳನ್ನು ಕರೆದುಕೊಂಡು ಆಸ್ಪತ್ರೆಗೆ ಹೋಗಿ ಬರುವುದಾಗಿ ಹೇಳಿ, ಕಾಣೆಯಾಗಿದ್ದರು. ಈ ಬಗ್ಗೆ ಗಂಡನ ಮನೆಯವರು ಪೊಲೀಸ್ ಠಾಣೆಗೆ ಶುಕ್ರವಾರ ದೂರು ನೀಡಿದ್ದರು.

ಆದ್ರೆ ಭಾನುವಾರ ಬೆಳಿಗ್ಗೆ ಗೋಕಾಕ ನಗರದ ಹತ್ತಿರ ಹರಿಯುವ ಘಟಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಲೋಳಸೂರ ಬ್ರೀಜ್ ಸಮೀಪ ತಾಯಿ-ಮಕ್ಕಳ ಮೃತ ದೇಹಗಳು ಪತ್ತೆಯಾಗಿವೆ. ದನಗಳ ಮೈ ತೊಳೆಯಲು ಹೋದ ಸಾವ೯ಜನಿಕರಿಗೆ ಶವ ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಜಗಳವಾಡಿ, ಜಿಗುಪ್ಸೆ ಹೊಂದಿ ನದಿ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಗೋಕಾಕ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಿಧಿಯಾಸೆಗೆ ದೇವರ ಕಲ್ಲನ್ನು ಕೆಡವಿದ್ದ ಕಳ್ಳರನ್ನು ಬಂಧಿಸಿದ ಪೊಲೀಸರು: ಮೂಕಪ್ಪಸ್ವಾಮಿ ಪವಾಡ ಎಂದ ಗ್ರಾಮಸ್ಥರು

Spread the loveಹಾವೇರಿ: 4 ತಿಂಗಳ ಹಿಂದೆ ನಿಧಿ ಆಸೆಗಾಗಿ ಕೋಣಕಲ್ಲು ಭರಮಪ್ಪ ದೇವರ ಕಲ್ಲನ್ನು ಕೆಡವಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ