ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಪುತ್ತಳಿ ಜೊತೆಗೆ ಬಾಬಾಸಾಹೇಬ್ ಅಂಬೇಡ್ಕರ್, ಮಹರ್ಷಿ ವಾಲ್ಮೀಕಿ, ಬಸವೇಶ್ವರ ಪುತಳಿನ್ನು ನಿರ್ಮಿಸಲು ಸರಕಾರ ಈಗಾಗಲೇ ಸಮ್ಮತಿ ನೀಡಿದೆ..
ಅದರ ಜೊತೆ ವೀರರಾಣಿ ಕಿತ್ತೂರು ಚೆನ್ನಮ್ಮ ಹಾಗೂ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಸಹ ಮಣಗುತ್ತಿ ಗ್ರಾಮದಲ್ಲಿ ಪ್ರತಿಷ್ಠಾಪಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ವೀರ ಕನ್ನಡಿಗರ ಘರ್ಜನೆ ಸಂಘಟನೆ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
