Breaking News

ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

Spread the love

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ದವರು ಬಿಪಿಎಲ್ ಕಾರ್ಡ್ ಹಿಂದಿರುಗಿಸಿ ಎಂಬ ಸಚಿವ ಉಮೇಶ್ ಕತ್ತಿ ಹೇಳಿಕೆಗೆ ಇದೀಗ ಸ್ವಪಕ್ಷೀಯ ನಾಯಕರೇ ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಶಾಸಕ ಸೋಮಶೇಖರ್ ರೆಡ್ಡಿ, ಸಚಿವ ಉಮೇಶ್ ಕತ್ತಿ ತಮ್ಮ ಸ್ವಂತ ನಿರ್ಧಾರವನ್ನು ಜನರ ಮೇಲೆ ಹೇರಬಾರದು. ಟಿವಿ, ಫ್ರಿಡ್ಜ್ ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಇರುತ್ತೆ. ಇನ್ನು ಬೈಕ್ ನ್ನು ಈಗ ಲೋನ್ ಮೇಲೂ ತೆಗೆದುಕೊಳ್ಳುತ್ತಾರೆ. ಸರ್ಕಾರದ ಯೋಜನೆಗಳು ಜನರಿಗೆ ತಲುಪಲು ಟಿವಿ ಬೇಕು. ಹಾಗಿರುವಾಗ ಇಂಥಹ ನಿಯಮ ಜಾರಿ ಮಾಡುವುದು ತಪ್ಪು ಎಂದರು.

ಸಚಿವರಾದವರು ಯಾವುದೇ ನಿರ್ಧಾರ ಕೈಗೊಳ್ಳುವ ಮೊದಲು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಬೇಕು. ನಾವು ಬಿಜೆಪಿಯವರಾಗಿದ್ದರೂ ಕೂಡ ಇಂಥಹ ನಿರ್ಧಾರಗಳ ವಿರುದ್ಧ ಹೋರಾಡುತ್ತೇವೆ ಎಂದು ಹೇಳಿದರು.


Spread the love

About Laxminews 24x7

Check Also

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ

Spread the loveಬೆಂಗಳೂರು: ರಾಮ ಮಂದಿರ ದೇಣಿಗೆ ಹಗರಣವನ್ನು ಬಿಜೆಪಿ ಮುಚ್ಚಿ ಹಾಕೋಕೆ ಪ್ರಯತ್ನ ಮಾಡ್ತಿದೆ ಅಂತ ಗೃಹ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ