Breaking News
Home / ಜಿಲ್ಲೆ / ಬೆಳಗಾವಿ / ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕದ 1500 ಶಾಲೆಗಳು ಬಂದ್..!

ಅನುದಾನಕ್ಕಾಗಿ ಆಗ್ರಹಿಸಿ ಕಲ್ಯಾಣ ಕರ್ನಾಟಕದ 1500 ಶಾಲೆಗಳು ಬಂದ್..!

Spread the love

ಬೆಳಗಾವಿ, ಫೆ.15- ಕಲ್ಯಾಣ ಕರ್ನಾಟಕ ಭಾಗದ ಅನುದಾನ ರಹಿತ ಶಾಲೆಗಳಿಗೆ ಅನುದಾನ ನೀಡಬೇಕೆಂದು ಆಗ್ರಹಿಸಿ 1500 ಶಾಲೆಗಳು ಇಂದು ಬಂದ್ ಮಾಡಿ ಪ್ರತಿಭಟನೆ ನಡೆಸಿವೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ವಿಜಯಪುರ ಸೇರಿದಂತೆ ಆರು ಜಿಲ್ಲೆಗಳ 1500 ಶಾಲೆಗಳು ಅನುದಾನಕ್ಕೆ ಆಗ್ರಹಿಸಿ ಇಂದು ಶಾಲಾ-ಕಾಲೇಜುಗಳನ್ನು ಬಂದ್ ಮಾಡಿ ಕಲ್ಯಾಣ ಕರ್ನಾಟಕ ಅನುದಾನ ರಹಿತ ಶಾಲೆಗಳ ಒಕ್ಕೂಟ ಪ್ರತಿಭಟನೆ ನಡೆಸಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದೆ.

2013-14ರಲ್ಲಿ 371ನೆ (ಜೆ) ವಿ ಜಾರಿಗೆ ತರಲಾಗಿತ್ತು. ಇದರನ್ವಯ ಪ್ರತಿ ವರ್ಷ ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಿಗೆ ಸಾವಿರಾರು ಕೋಟಿ ಅನುದಾನ ಬಂದಿದೆ. ಬಂದಂತಹ ಅನುದಾನ ಸಮರ್ಪಕವಾಗಿ ಬಳಕೆಯಾಗದೆ ವಾಪಸ್ ಹೋಗಿದೆ. ಈ ಭಾಗದ ಜಿಲ್ಲೆಗಳಲ್ಲಿ ಸುಮಾರು 1500 ಖಾಸಗಿ ಅನುದಾನ ರಹಿತ ಶಾಲೆಗಳಿವೆ.ಕನ್ನಡ, ಉರ್ದು ಮಾಧ್ಯಮ ಶಾಲೆಗಳಿದ್ದು, ಸುಮಾರು 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಶಾಲೆಗಳಲ್ಲಿ ಓದುತ್ತಿದ್ದಾರೆ. ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು. ಮೂಲಭೂತ ಸೌಲಭ್ಯಗಳ ಕೊರತೆ ಹಿನ್ನೆಲೆಯಲ್ಲಿ 125 ಶಾಲೆಗಳನ್ನು ಸರ್ಕಾರ ಮುಚ್ಚಲು ಹೊರಟಿರುವ ಕ್ರಮವನ್ನು ಕೈಬಿಡಬೇಕು.

ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿಟ್ಟಿರುವ ಹಣ ಬಳಕೆಗೆ ಅವಕಾಶ ಮಾಡಿಕೊಡಬೇಕು. ಈ ಎಲ್ಲ ನಮ್ಮ ಬೇಡಿಕೆಗಳಿಗೆ ಮನ್ನಣೆ ನೀಡದ ಹಿನ್ನೆಲೆಯಲ್ಲಿ ನಾವು ಇಂದು ಸಾಂಕೇತಿಕವಾಗಿ ಶಾಲೆಗಳನ್ನು ಬಂದ್ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದೇವೆ ಎಂದು ಶಾಲಾ ಒಕ್ಕೂಟದ ಪದಾಕಾರಿಗಳು ಹೇಳಿದ್ದಾರೆ.

ಈ ಹೋರಾಟಕ್ಕೆ ಖಾಸಗಿ ಶಾಲೆಗಳ ಒಕ್ಕೂಟ ಬೆಂಬಲ ನೀಡಿದೆ. ಖಾಸಗಿ ಶಾಲೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಲೋಕೇಶ್ ತಾಳಿಕಟ್ಟೆ ಮಾತನಾಡಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಾಲೆಗಳ ಪರಿಸ್ಥಿತಿ ಶೋಚನೀಯವಾಗಿದೆ. ಅಲ್ಲಿ ಖಾಸಗಿ ಅನುದಾನ ರಹಿತ ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕು.

ಈ ಮೂಲಕ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಪೂರಕವಾಗಿ ಸ್ಪಂದಿಸಬೇಕು. ಸದ್ಯದಲ್ಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಎದುರಾಗಲಿದೆ. ಶಾಲೆಗಳವರು ಪ್ರತಿಭಟನೆಗಿಳಿದರೆ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ. ಸರ್ಕಾರ ಎಚ್ಚೆತ್ತು ಶಾಲೆಗಳನ್ನು ಅನುದಾನಕ್ಕೆ ಒಳಪಡಿಸಬೇಕೆಂದು ಅವರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ