ಬೆಂಗಳೂರು : ಮನೆಯಲ್ಲಿ ಟಿ ವಿ, ಬೈಕ್, ಫ್ರಿಡ್ಜ್ ಇದ್ದರೆ ಬಿಪಿಎಲ್ ಕಾರ್ಡ್ ರದ್ದುಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದ ಸಚಿವ ಉಮೇಶ ಕತ್ತಿ ಇದೀಗ ಯೂಟರ್ನ್ ಹೊಡೆದಿದ್ದಾರೆ.
ಸಚಿವರ ಹೇಳಿಕೆ ಸಾರ್ವಜನಿಕರು, ಸ್ವಪಕ್ಷ ಹಾಗೂ ವಿರೋಧ ಪಕ್ಷದ ನಾಯಕರಿಂದ ವಿರೋಧ ವ್ಯಕ್ತ ವಾಗಿರುವ ಹಿನ್ನೆಲೆಯಲ್ಲಿ ಬಿಪಿಎಲ್ ಕಾರ್ಡ್ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಈ ಹಿಂದೆ ಮಾನದಂಡಗಳೇ ಮುಂದುವರಿಸಲಾಗುವುದು ಎಂದು ಸೋಮವಾರ ಹೇಳಿದ್ದಾರೆ.
ಈ ಸಂಬಂಧ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಉಮೇಶ್ ಕತ್ತಿ ಅವರು, ನಾನು ಸಚಿವನಾದ ನಂತರ ಯಾವುದೇ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಬಿಪಿಎಲ್ ಗೆ ಸಂಬಂಧಿಸಿದಂತೆ ಈ ಹಿಂದೆ ಇದ್ದ ಮಾನದಂಡಗಳನ್ನೇ ಮುಂದುವರಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
Laxmi News 24×7