Breaking News

ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.

Spread the love

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ಸರ್ಕಾರ ನೇಮಿಸಿದೆ.

ಕೃಷಿ ಇಲಾಖೆ ರೈತರ ಹಿತಕ್ಕಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚಾರ ಪಡಿಸಲು ಹಾಗೂ ಕೃಷಿಕರಲ್ಲಿ ಸ್ಫೂರ್ತಿ ತುಂಬಲು ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಲಾಗಿದೆ.

ಕೃಷಿ ಇಲಾಖೆಯ ರಾಯಭಾರಿಯಾಗಿ ಕೆಲಸ ನಿರ್ವಹಿಸಲು ಯಾವುದೇ ಸಂಭಾವನೆ ಇಲ್ಲದೇ ದುಡಿಯುವುದಾಗಿ ದರ್ಶನ್ ಒಪ್ಪಿಕೊಂಡಿದ್ದರು. ಅಲ್ಲದೇ ಈ ಕುರಿತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರ ರೈತರೊಂದಿಗೊಂದು ದಿನ ಕಾರ್ಯಕ್ರಮವನ್ನು ಸಹ ಮೆಚ್ಚಿದ್ದರು.

ಸ್ವತಃ ಕೃಷಿಕರೂ ಆಗಿರುವ ದರ್ಶನ್ ಬಿ.ಸಿ.ಪಾಟೀಲ್ ಅವರೊಂದಿಗೆ ಚರ್ಚಿಸಿ ತಮ್ಮ ಅಭಿಲಾಷೆಯನ್ನು ವ್ಯಕ್ತಪಡಿಸಿದ್ದರು.ಈ ಹಿನ್ನಲೆಯಲ್ಲಿ ಸರ್ಕಾರ ಇದೀಗ ಕೃಷಿ ಇಲಾಖೆಯ ರಾಯಭಾರಿಯನ್ನಾಗಿ ದರ್ಶನ್ ಅವರನ್ನು ನೇಮಿಸಿ ಆದೇಶಿಸಿದೆ.


Spread the love

About Laxminews 24x7

Check Also

ತಿರಂಗ ಯಾತ್ರೆಯಲ್ಲಿ ಗಮನ ಸೆಳೆದ ಈಸೂರು ದಂಗೆಯ ಸ್ತಬ್ಧಚಿತ್ರ

Spread the loveಶಿವಮೊಗ್ಗ: ನಗರದ  ಶೀನಪ್ಪಶೆಟ್ಟಿ ವೃತ್ತದಲ್ಲಿ ಸ್ವಾತಂತ್ರ್ಯೋತ್ಸವ  ಅಂಗವಾಗಿ ಬಿಜೆಪಿ ವತಿಯಿಂದ ರಾಮಣ್ಣಶ್ರೇಷ್ಟಿ ಪಾರ್ಕ್‌ನಿಂದ ಗೋಪಿ ವೃತ್ತದವರೆಗೆ ತಿರಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ