Breaking News

ಸರ್ಕಾರದ ವೈಫಲ್ಯ ಖಂಡಿಸಿ 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ

Spread the love

ಕಿತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆ, ತೈಲ, ಗ್ಯಾಸ್ ಬೆಲೆ ಹೆಚ್ಚಿಸಿರುವ ಸರ್ಕಾರದ ವೈಫಲ್ಯ ಖಂಡಿಸಿ ಫೆ. 18 ಕ್ಕೆ ಬೆಳಿಗ್ಗೆ 11 ಗಂಟೆಗೆ ಕಿತ್ತೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು ಎಂದು ಕಾಂಗ್ರೆಸ್ ಪಕ್ಷದ ಗ್ರಾಮಾಂತರ ಜಿಲ್ಲಾ ಘಟಕದ ಅಧ್ಯಕ್ಷ ವಿನಯ ನವಲಗಟ್ಟಿ ತಿಳಿಸಿದ್ದಾರೆ.

ಪಟ್ಟಣದ ಡೊಂಬರಕೊಪ್ಪ ಪ್ರವಾಸಿ ಮಂದಿರದಲ್ಲಿ ಸುದ್ದಿಗೊಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರದ ವೈಫಲ್ಯವನ್ನು ಖಂಡಿಸಿ ಇಲ್ಲಿಯ ಚನ್ನಮ್ಮಾಜಿಯ ವೃತ್ತದಿಂದ ತಹಶೀಲ್ದಾರ ಕಚೇರಿಯವರೆಗೆ ಚಕ್ಕಡಿ ಮತ್ತು ಟ್ರ್ಯಾಕ್ಟರ್ ಮೂಲಕ ರ್ಯಾಲಿ ನಡೆಸಿ ತಹಶಿಲ್ದಾರ ಅವರಿಗೆ ಮನವಿ ಸಲ್ಲಿಸಲಾಗುವುದು. ಜಿಲ್ಲಾ, ತಾಲೂಕು ಮಟ್ಟದ ಕಾಂಗ್ರೆಸ್ ಮುಖಂಡರು ಹಾಗೂ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.

ಇದೇ ವೇಳೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನೂ ಹೆಚ್ಚು ಬಲಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಲಾಗುವುದು, ಒಂದಷ್ಟು ನಾಯಕರು ಪಕ್ಷಕ್ಕೆ ಹೊಸದಾಗಿ ಸೇರ್ಪಡೆಯಾಗಿದ್ದರಿಂದ ಪಕ್ಷದಲ್ಲಿ ಮೂರು ಬಣಗಳಾಗಿ ವಿಂಗಡಣೆಯಾಗಿದ್ದು, ಹಲವು ನಾಯಕರು ಹಾಗೂ ಕಾರ್ಯಕರ್ತರು ಅಸಮಾಧಾನವಾಗಿದ್ದಾರೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ