Breaking News
Home / ರಾಜ್ಯ / ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Spread the love

ಕಾರವಾರ: ಗೋವಾದಿಂದ ಕಾರವಾರಕ್ಕೆ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 9.13 ಲಕ್ಷ ಮೌಲ್ಯದ 505 ಲೀಟರ್ ಮದ್ಯವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇಂದು ಮುಂಜಾನೆ 2.30 ರ ಸಮಯದಲ್ಲಿ ಮಾಜಾಳಿ ಠಾಣಾ ವ್ಯಾಪ್ತಿಯಲ್ಲಿ ಗೋವಾದಿಂದ ಬರುತ್ತಿದ್ದ ವಾಹನ ಸಂಖ್ಯೆ AP 37TD-9855 ಲಾರಿಯನ್ನು ತಪಾಸಣೆ ಮಾಡಲಾಗಿದ್ದು, ಮೀನು ತುಂಬುವ 300 ಖಾಲಿ ಕ್ರೇಟ್ ಗಳ ಮದ್ಯೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಪತ್ತೆಯಾಗಿದೆ. ಲಾರಿ ಚಾಲಕನನ್ನು ಬಂಧಿಸಿ 505ಲೀ ಗೋವಾ ಮದ್ಯ ವಶಕ್ಕೆ ಪಡೆಯಲಾಗಿದೆ.

ಅಂದಾಜು 9.13 ಲಕ್ಷ ರೂ ಮೌಲ್ಯದ ಮದ್ಯ, 10 ಚಕ್ರಗಳ ಕಂಟೈನರ್ ಅಂದಾಜು ಮೌಲ್ಯ ರೂ 15 ಲಕ್ಷಗಳು, ಪ್ಲಾಸ್ಟಿಕ್ ಕ್ರೇಟ್ ಸೇರಿದಂತೆ ಒಟ್ಟು 25 ಲಕ್ಷ ಮೌಲ್ಯದ ಸ್ವತ್ತುಗಳನ್ನು ಜಪ್ತಿ ಮಾಡಲಾಗಿದೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ, ಅತ್ತ ವಿದೇಶಕ್ಕೆ ಹೋದರಾ ಸಂಸದ?

Spread the loveಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ವಿಡಿಯೋ ಪ್ರಕರಣದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ