Breaking News

ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿನ ಚಕಮಕಿ

Spread the love

ತುಮಕೂರು, ಫೆ.16- ಫಾಸ್ಟ್‍ಟ್ಯಾಗ್ ಕಡ್ಡಾಯದ ಹಿನ್ನೆಲೆಯಲ್ಲಿ ಟೋಲ್ ಸಿಬ್ಬಂದಿ ಹಾಗೂ ವಾಹನ ಚಾಲಕರ ನಡುವೆ ಮಾತಿಗೆ ಮಾತು ಬೆಳೆದು ಕೈ ಕೈ ಮಿಲಾಯಿಸಿರುವ ಘಟನೆಗಳು ವರದಿಯಾಗಿವೆ. ಇಂದಿನಿಂದ ಟೋಲ್‍ಗಳಲ್ಲಿ ಫಾಸ್ಟ್‍ಟ್ಯಾಗ್ ಕಡ್ಡಾಯ ಮಾಡಲಾಗಿದೆ. ಟ್ಯಾಗ್ ಇಲ್ಲದ ವಾಹನಗಳಿಂದ ಟೋಲ್ ಸಿಬ್ಬಂದಿ ದುಪ್ಪಟ್ಟು ಹಣ ಪಡೆಯಲು ಮುಂದಾದಾಗ ಚಾಲಕರು ಸಿಬ್ಬಂದಿಗಳೊಂದಿಗೆ ಮಾತಿನ ಚಕಮಕಿ ನಡೆಸಿದ್ದಾರೆ.

ತುಮಕೂರಿನ ಕ್ಯಾತ್ಸಂದ್ರ ಜಾಸ್ ಟೋಲ್ ಸಮೀಪ ಸಿಬ್ಬಂದಿಗಳು ಹಾಗೂ ವಾಹನ ಚಾಲಕರು ಕೈ ಕೈ ಮಿಲಾಯಿಸಿದ್ದಾರೆ. ತುಮಕೂರು-ಕೊರಟಗೆರೆ-ಮಧುಗಿರಿ ಮಾರ್ಗದ ರಸ್ತೆಯಲ್ಲಿ ಹಾಗೂ ಶಿರಾದ ಕಳ್ಳಂಬೆಳ್ಳ ಬಳಿ ಇರುವ ಸಮೀಪವೂ ಹಲವಾರು ಟೋಲ್‍ಗಳಿವೆ. ಎಲ್ಲಾ ಟೋಲ್‍ಗಳಲ್ಲೂ ಫಾಸ್ಟ್‍ಟ್ಯಾಗ್ ಇಲ್ಲದ ವಾಹನ ಸವಾರರಿಂದ ನಿನ್ನೆ ಮಧ್ಯ ರಾತ್ರಿಯಿಂದಲೇ ದುಪ್ಪಟ್ಟು ಹಣ ಸಂಗ್ರಹ ಮಾಡಲಾಗುತ್ತಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ