Breaking News

ಹೆಣ್ಣುನಾಯಿಯೊಂದನ್ನು ಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕ

Spread the love

ಮೈಸೂರು (ಫೆ. 16): ಬೀದಿ ನಾಯಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಮೈಸೂರಿನಲ್ಲಿ ಯುವಕನನ್ನು ಬಂಧಿಸಲಾಗಿದೆ. ಮೈಸೂರಿನ ವಿವಿ ಪುರಂ ಪೋಲೀಸರಿಂದ ಯುವಕನನ್ನು ಬಂಧಿಸಲಾಗಿದ್ದು, ಆ ಯುವಕನ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ. ಪೀಪಲ್ ಫಾರ್ ಅನಿಮಲ್ ಸಂಸ್ಥೆಯ ಸದಸ್ಯರು ನೀಡಿದ ದೂರಿನ ಅನ್ವಯ ಹಾಗೂ ವಿಡಿಯೋ ಆಧಾರದ ಮೇಲೆ ಆ ಯುವಕನನ್ನು ಬಂಧಿಸಲಾಗಿದೆ.

ಫೆ. 11ರ ರಾತ್ರಿ 11 ಗಂಟೆ ವೇಳೆ ಈ ಘಟನೆ ನಡೆದಿದೆ. ಮೈಸೂರಿನ ಗೋಕುಲಂನ ಗಣಪತಿ ದೇವಾಲಯದ ರಸ್ತೆ ಬಳಿ ಈ ಘಟನೆ ನಡೆದಿದ್ದು, ಹೆಣ್ಣುನಾಯಿಯೊಂದನ್ನು ಹಿಡಿದು ಲೈಂಗಿಕ ಕಿರುಕುಳ ನೀಡುತ್ತಿದ್ದ ಯುವಕನ ಕೃತ್ಯವನ್ನು ಸ್ಥಳೀಯರೊಬ್ಬರು ವಿಡಿಯೋ ಮಾಡಿದ್ದರು. ಆ ವಿಡಿಯೋ ಆಧಾರದ ಮೇಲೆ ಪೀಪಲ್ ಫಾರ್ ಅನಿಮಲ್‌ ಸಂಸ್ಥೆಯ ಕೆ.ಬಿ. ಹರೀಶ್ ದೂರು ನೀಡಿದ್ದಾರೆ.

ವಿಡಿಯೋ ಸಾಕ್ಷಿಯ ಆಧಾರದ ಮೇಲೆ ಯುವಕನ ಮೇಲೆ ದೂರು ದಾಖಲಿಸಿ, ಬಂಧಿಸಲಾಗಿದೆ. ಪೀಪಲ್ ಫಾರ್ ಅನಿಮಲ್‌ ಸಂಸ್ಥೆಯ ಸದಸ್ಯ ಕೆ.ಬಿ. ಹರೀಶ್ ಎಂಬುವವರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ನಾಯಿಯ ವೈದ್ಯಕೀಯ ಪರೀಕ್ಷೆಗೆ ಮುಂದಾದ ಪೊಲೀಸರು ವರದಿ ಬಂದ ನಂತರ ಯುವಕನ ಮೇಲೆ ಕಾನೂನು ಕ್ರಮ ಜರುಗಿಸಲು ನಿರ್ಧಾರ ಮಾಡಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ