Breaking News

ಪಿಎಂ ಕೇರ್ಸ್​ ಲೆಕ್ಕವನ್ನೇ ಕೊಡದವರು ರಾಮ ಮಂದಿರ ಹಣದ ಲೆಕ್ಕಾ ಕೊಡ್ತಾರ?; ಸಿದ್ದರಾಮಯ್ಯ

Spread the love

ಬೆಂಗಳೂರು (ಫೆಬ್ರವರಿ 16); ಕೊರೋನಾ ಸಂದರ್ಭದಲ್ಲಿ ಜನರಿಂದ ಸಂಗ್ರಹಿಸಲಾದ ಪಿಎಂ ಕೇರ್ಸ್​ ಹಣದ ಲೆಕ್ಕವನ್ನೇ ಕೊಡದವರು, ಇದೀಗ ರಾಮ ಮಂದಿರ ನಿರ್ಮಾಣಕ್ಕಾಗಿ ಸಂಗ್ರಹಿಸಲು ಮುಂದಾಗಿರುವ ಹಣದ ಲೆಕ್ಕ ಕೊಡ್ತಾರಾ? ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ಧ ನೇರಾ ನೇರ ವಾಗ್ದಾಳಿ ನಡೆಸಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂ ಕೋರ್ಟ್​ ಹಸಿರು ನಿಶಾನೆ ನೀಡುತ್ತಿದ್ದಂತೆ ಸ್ವತಃ ಪ್ರಧಾನಿ ನರೇಂದ್ರ ಮೋದಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಸಿದ್ದರು. ಅಲ್ಲದೆ, ದೇವಾಲಯ ನಿರ್ಮಾಣಕ್ಕೆ “ರಾಮಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್”​ ಸಹ ರೂಪಿಸಲಾಗಿತ್ತು. ಈ ಟ್ರಸ್ಟ್​​ ಜನರಿಂದ ದೇಣಿಗೆ ಸ್ವೀಕರಿಸಿ ಆ ಹಣದಿಂದ ದೇವಾಲಯ ನಿರ್ಮಾಣ  ಮಾಡಲು ಮುಂದಾಗಿದೆ. ಆದರೆ, ಈ ನಿರ್ಧಾರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಆರಂಭದಿಂದಲೂ ಕಟುವಾಗಿ ಟೀಕಿಸುತ್ತಲೇ ಇದ್ದಾರೆ.

ಈ ಕುರಿತು ಇಂದು ಸರಣಿ ಟ್ವೀಟ್​ ಮಾಡುವ ಮೂಲಕ ಕೇಂದ್ರ ಸರ್ಕಾರ ಮತ್ತು ಆರ್​ಎಸ್​ಎಸ್​ ಕಾಲೆಳೆದಿರುವ ಸಿದ್ದರಾಮಯ್ಯ, “ಸಾರ್ವಜನಿಕರಿಂದ ಹಣ ಸಂಗ್ರಹಿಸುವವವರು ಪಾರದರ್ಶಕವಾಗಿ ನಡೆದುಕೊಳ್ಳಬೇಕಾಗುತ್ತದೆ. ಪಿಎಂ ಕೇರ್ಸ್ ನಿಧಿಯ ಲೆಕ್ಕವನ್ನೇ ಕೊಡದಿರುವ ಈಗಿನ ಬಿಜೆಪಿ ಸರ್ಕಾರ ರಾಮಮಂದಿರ ನಿರ್ಮಾಣಕ್ಕೆ ಸಂಗ್ರಹಿಸುವ ಹಣದ ಲೆಕ್ಕ ನೀಡುತ್ತಾ? ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ” ಎಂದಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ, “ರಾಮಮಂದಿರ ನಿರ್ಮಾಣಕ್ಕೆ ಯಾರ ವಿರೋಧವೂ ಇಲ್ಲ. ಆದರೆ ಇದೇ ಬಿಜೆಪಿ ಹಿಂದೊಮ್ಮೆ ರಾಮ ಮಂದಿರ ನಿರ್ಮಾಣಕ್ಕಾಗಿ ಇಟ್ಟಿಗೆ-ಹಣ ಸಂಗ್ರಹಿಸಿತ್ತಲ್ಲಾ, ಅದು ಏನಾಯಿತೆಂದು ಯಾರಿಗೂ ಗೊತ್ತಿಲ್ಲ.‌ ಅದರ ಲೆಕ್ಕವನ್ನು ಬಿಜೆಪಿ ಪಕ್ಷ ಮೊದಲು ಸಾರ್ವಜನಿಕರಿಗೆ ನೀಡಬೇಕಾಗುತ್ತದೆ” ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಇತ್ತೀಚೆಗೆ ರಾಮ ಮಂದಿರ ನಿರ್ಮಾಣಕ್ಕೆ ಜನರಿಂದ ದೇಣಿಗೆ ಸಂಗ್ರಹಿಸಲು ಮುಂದಾಗಿರುವ ಆರ್​ಎಸ್​ಎಸ್​ ಕಾರ್ಯಕರ್ತರು ಹಣ ನೀಡದವರ ಮನೆಯನ್ನು ಗುರುತು ಮಾಡುತ್ತಿದೆ. ಈ ಕುರಿತು ಸೋಮವಾರವೇ ಅಸಮಾಧಾನ ವ್ಯಕ್ತಪಡಿಸಿದ್ದ ಮಾಜಿ ಸಿಎಂ ಕುಮಾರಸ್ವಾಮಿ, “ರಾಮಮಂದಿರಕ್ಕೆ ಹಣ ಸಂಗ್ರಹಿಸುತ್ತಿರುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವುದು ತಿಳಿಯಿತು.


Spread the love

About Laxminews 24x7

Check Also

ಶಾಸಕ ಕೆ.ಸಿ.ವೀರೇಂದ್ರ ಮತ್ತೆ 6 ದಿನ ಇ.ಡಿ ಕಸ್ಟಡಿಗೆ

Spread the love ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರ ಐದು ದಿನಗಳ ಪೊಲೀಸ್ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ