Breaking News

ಹಿಂಡಲಗಾ ಜೈಲಿನಲ್ಲಿದ್ದುಕೊಂಡೇ ಧಾರವಾಡ ಮೂಲದ ಶೆಟ್ಟರ್ ಕಾಲೋನಿಯ ಸ್ನೇಹಾ ದೇಸಾಯಿ ಎಂಬ ಉದ್ಯಮಿಗೆ ಧಮ್ಕಿ

Spread the love

ಬೆಳಗಾವಿ: ಕೊಲೆ ಕೇಸ್ ನಲ್ಲಿ ಹಿಂಡಲಗಾ ಜೈಲು ಸೇರಿರುವ ರೌಡಿ ಶೀಟರ್ ಒಬ್ಬ ಮಹಿಳೆಯೋರ್ವರಿಗೆ ಫೋನ್ ಮಾಡಿ ಹಣ ನಿಡುವಂತೆ ಧಮ್ಕಿ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಆರೋಪಿ ತೌಸಿಫ್ ಜೈಲಿನಲ್ಲಿದ್ದುಕೊಂಡೇ ಧಾರವಾಡ ಮೂಲದ ಶೆಟ್ಟರ್ ಕಾಲೋನಿಯ ಸ್ನೇಹಾ ದೇಸಾಯಿ ಎಂಬ ಉದ್ಯಮಿಗೆ ಧಮ್ಕಿ ಹಾಕಿ ತನ್ನ ಬೇಲ್ ಗಾಗಿ 3 ಲಕ್ಷ ರೂ ಹಣ ವಸೂಲಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಸ್ನೇಹಾ ಹಾಗೂ ತೌಸಿಫ್ ಎಸ್ ಎಸ್ ಎಲ್ ಸಿಯಲ್ಲಿ ಸ್ನೇಹಿತರು. ಸ್ನೇಹಾ ತನ್ನ ಉದ್ಯಮಕ್ಕೆ ತೌಸಿಫ್ ಬಳಿ ಹಣ ಪಡೆದು ಬಳಿಕ ಬಡ್ಡಿ ಸಮೇತ ಹಿಂದಿರುಗಿಸಿದ್ದರು. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ತೌಸಿಫ್ ಈಗ ಸ್ನೇಹಾಗೆ ಕರೆ ಮಾಡಿ ಬೆದರಿಕೆ ಹಾಕಿದ್ದಲ್ಲದೇ ತನ್ನ ಬೇಲ್ ಗಾಗಿ ಹಣ ನೀಡಿವುಂತೆ ಹೇಳಿ ವಸೂಲಿ ಮಾಡಿದ್ದಾನೆ. ಒಟ್ಟಾರೆ ಬೆಳಗಾವಿ ಹಿಂಡಲಗಾ ಜೈಲಿನ ಕರ್ಮಕಾಂಡ ಇದೀಗ ಬಯಲಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ