Breaking News

ಮೀಸಲಾತಿ ನೀಡದಿದ್ದರೆ ಬೆಂಕಿ ಹಚ್ಚುತ್ತೇವೆ; ಕುರುಬ ಮುಖಂಡ ಎಚ್ಚರಿಕೆ

Spread the love

ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಹೋರಾಟ ತಾರಕಕ್ಕೇರಿದ್ದು, ಇದೀಗ ಕುರುಬ ಸಮುದಾಯದವರು ಎಸ್.ಟಿ. ಮೀಸಲಾತಿಗಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುರುಬ ಸಮುದಾಯದ ಮುಖಂಡರು ರಾಜ್ಯ ಸರ್ಕಾರ ತಕ್ಷಣ ತಮ್ಮ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಈ ವೇಳೆ ಮಾತನಾಡಿದ ಕುರುಬ ಎಸ್.ಟಿ. ಹೋರಾಟ ಸಮಿತಿ ಕಾರ್ಯದರ್ಶಿ ರಾಜೇಂದ್ರ ಸಣ್ಣಕ್ಕಿ, ಕುರುಬ ಸಮುದಾಯಕ್ಕೆ ಎಸ್.ಟಿ. ಮೀಸಲಾತಿ ನೀಡದಿದ್ದರೆ ರಾಜ್ಯದ ವಿವಿಧೆಡೆಗಳಲ್ಲಿ ಬೆಂಕಿ ಹಚ್ಚುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

ರಾಜ್ಯದಲ್ಲಿ ನಮ್ಮದು ಅತಿದೊಡ್ದ ಸಮುದಾಯ. ಆದರೆ ಕುರುಬರು ಶೈಕ್ಷಣಿಕ, ಧಾರ್ಮಿಕ, ಸಾಮಾಜಿಕವಾಗಿ ಅತಿ ಹಿಂದುಳಿದ ವರ್ಗವಾಗಿದೆ. ಹೀಗಾಗಿ ನಮಗೆ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ